ಕನ್ನಡದ ‘ಕೆಂಡ’ ಸಿನಿಮಾ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ಆಯ್ಕೆ ಆಗಿದೆ.
ಸಹದೇವ್ ಕೆಲವಡಿ ಅವರು ನಿರ್ದೇಶನ ಮಾಡಿರುವ ‘ಕೆಂಡ’ ಸಿನಿಮಾವನ್ನು ರೂಪಾ ರಾವ್ ಅವರು ನಿರ್ಮಾಣ ಮಾಡಿದ್ದಾರೆ.
”14ನೇ ಸಾಲಿನ ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್-2024’ ದೆಹಲಿಯಲ್ಲಿ ನಡೆಯಲಿದ್ದು, ಈ ಚಿತ್ರೋತ್ಸವಕ್ಕೆ ‘ಕೆಂಡ’ ಸಿನಿಮಾ ಪ್ರವೇಶ ಪಡೆದುಕೊಂಡಿದೆ. ಹಲವು ಮಾನದಂಡಗಳನ್ನು ದಾಟಿಕೊಂಡು ‘ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್’ಗೆ ‘ಕೆಂಡ’ ಸಿನಿಮಾ ಆಯ್ಕೆ ಆಗಿದೆ” ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಫೌಂಡ್ರಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಹೇಗೆ ಈ ವ್ಯವಸ್ಥೆಯ ವಿಷವ್ಯೂಹಕ್ಕೆ ಸಿಲುಕುತ್ತಾನೆ? ಆತನನ್ನು ಪಟ್ಟಭದ್ರರು ಹೇಗೆಲ್ಲ ಬಳಸಿಕೊಳ್ಳುತ್ತಾರೆ? ಆ ಕ್ಷಣದ ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತದೆ ಎಂಬಿತ್ಯಾದಿ ಕುತೂಹಲಕರ ತಿರುವುಗಳೊಂದಿಗೆ ಸಿನಿಮಾ ಮೂಡಿ ಬರುತ್ತಿದೆ.
ಬೆಂಗಳೂರು ಮಹಾ ನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ, ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ತಯಾರುಗೊಂಡಿದೆ.
ಈ ಹಿಂದೆ ʻಗಂಟುಮೂಟೆ’ ಎಂಬ ವಿಶಿಷ್ಟ ಸಿನಿಮಾ ಕೊಟ್ಟಿದ್ದ ತಂಡ ʻಕೆಂಡʼಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗುತ್ತಿದೆ. ಈ ಚಿತ್ರ ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ.
Be the first to comment