ನ್ಯೂಯಾರ್ಕ್‍ನಲ್ಲಿ ‘ಕೆಂಡ’ ಪ್ರೀಮಿಯರ್ ಶೋ

ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಕೆಂಡ’ ಚಿತ್ರ ನ್ಯೂಯಾರ್ಕ್‍ನ ಟಿಶ್ ಸ್ಕೂಲ್ ಆಫ್ ಆರ್ಟ್‍ನಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

 ‘ಕೆಂಡ’ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಅದಕ್ಕೂ ಮೊದಲು ವಿದೇಶದಲ್ಲಿ ಪ್ರೀಮಿಯರ್ ಶೋ ಕಂಡಿದೆ. ಮಾರ್ಟಿನ್ ಸ್ಕಾರ್ಸೆಸ್, ಆಂಗ್ ಲೀ, ಜಿಮ್ ಜರ್ಮುಷ್, ಸ್ಟೈಕ್ ಲೀ, ಕೋಯೆನ್ ಬ್ರದರ್ಸ್ ಮುಂತಾದ ಘಟಾನುಘಟಿ ನಿರ್ದೇಶಕರಿಗೆ ತರಬೇತಿ ಕೊಟ್ಟಿರುವ ನ್ಯೂಯಾರ್ಕ್‍ನ ಟಿಶ್ ಸ್ಕೂಲ್ ಆಫ್ ಆರ್ಟ್‍ನಲ್ಲಿ ‘ಕೆಂಡ’ ಚಿತ್ರದ ಪ್ರೀಮಿಯರ್ ಪ್ರದರ್ಶನ ಇತ್ತೀಚೆಗೆ ನಡೆದಿದೆ.

ಈಗಾಗಲೇ ಸ್ವಿಟ್ಜರ್ ಲ್ಯಾಂಡಿನಲ್ಲಿಯೂ ‘ಕೆಂಡ’ ಪ್ರೀಮಿಯರ್ ಶೋ ನಡೆದಿದೆ.  ಕೆಲವು ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿರುವ ‘ಕೆಂಡ’ ಚಿತ್ರ  ಸದ್ಯದಲ್ಲೇ ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದಲ್ಲಿ ಒಬ್ಬ ಸಾಮಾನ್ಯ ಹುಡುಗ ವ್ಯವಸ್ಥೆಯ ಅಡಕತ್ತರಿಗೆ ಸಿಕ್ಕು ಸಿಡಿದೇಳುವ ಕಥೆ ಇದೆ. ರಂಗಭೂಮಿ ಪ್ರತಿಭೆಗಳೇ ಹೆಚ್ಚಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರು ನಟಿಸಿದ್ದಾರೆ.

ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ಚಿತ್ರ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿದೆ. ‘ಗಂಟುಮೂಟೆ’ ಚಿತ್ರದ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದ ಸಹದೇವ ಕೆಲವಡಿ ಈ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ಛಾಯಾಗ್ರಹಣವನ್ನೂ ಮಾಡಿದ್ದಾರೆ.

‘ಕೆಂಡ’ ಚಿತ್ರದ ಬಿಡುಗಡೆಗೆ ಅಂತಾರಾಷ್ಟ್ರೀಯ ಚಿತ್ರನಿರ್ಮಾಣ ಸಂಸ್ಥೆ ಕಿಲ್ಜಾಯ್‍ ಫಿಲಂಸ್‍ ಮುಂದಾಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!