ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಜಯಮಾಲಾ ಆಯ್ಕೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ.

ಈ ಭಾರಿಯ ಫಿಲ್ಮ್ ಚೇಂಬರ್ ಅಧ್ಯಕ್ಷ ಸ್ಥಾನಕ್ಕೆ ಜಯಮಾಲಾ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಭಾ.ಮಾ. ಹರೀಶ್ ನಡುವೆ  ಪೈಪೋಟಿ ಏರ್ಪಟ್ಟಿತ್ತು. ಅಂತಿಮವಾಗಿ 512 ಮತ ಪಡೆದು ಜಯಮಾಲಾ ಜಯಗಳಿಸಿದ್ದಾರೆ.

ಶನಿವಾರ  ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ 2026–27ನೇ ಸಾಲಿನ ವಾರ್ಷಿಕ ಚುನಾವಣೆ ನಡೆಯಿತು. ಈ ಬಾರಿಯ ಅಧ್ಯಕ್ಷ ಸ್ಥಾನ ನಿರ್ಮಾಪಕರ ವಲಯಕ್ಕೆ ಮೀಸಲಾಗಿತ್ತು. ಜಯಮಾಲಾ ಹಾಗೂ ನಿರ್ಮಾಪಕ ಭಾ.ಮಾ.ಹರೀಶ್‌ ಅವರು  ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಯಲ್ಲಿದ್ದರು. ಒಟ್ಟು 846 ಮತಗಳು ಚಲಾವಣೆಯಾಗಿದ್ದು, ಜಯಮಾಲಾ ಅವರು 512 ಮತ ಪಡೆದು ಗೆಲುವು ಸಾಧಿಸಿದರು.

ಉಪಾಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ನಟ ಸುಂದರ್‌ರಾಜ್‌, ವಿತರಕ ವಲಯದಿಂದ ನಿರ್ಮಾಪಕ ಕೆ.ಮಂಜು, ಪ್ರದರ್ಶಕರ ವಲಯದಿಂದ ಕಿಶೋರ್‌ ಕುಮಾರ್‌ ಎಂ.ಎನ್‌. ಆಯ್ಕೆಯಾದರು. ಗೌರವ ಕಾರ್ಯದರ್ಶಿ ಸ್ಥಾನಕ್ಕೆ ನಿರ್ಮಾಪಕ ವಲಯದಿಂದ ಎ.ಗಣೇಶ್‌, ಪ್ರದರ್ಶಕ ವಲಯದಿಂದ ಅಶೋಕ್‌ ಕೆ.ಸಿ., ವಿತರಕ ವಲಯದಿಂದ ರಮೇಶ್‌ ಬಾಬು ಎಂ.ಆರ್‌., ಖಜಾಂಚಿಯಾಗಿ ಜಯಸಿಂಹ ಮುಸುರಿ ಬಿ.ಕೆ. ಆಯ್ಕೆಯಾದರು.

ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿಗೆ ಮೂರು ವಲಯದಿಂದ 48 ಮಂದಿ ಸದಸ್ಯರನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿದೆ.

ಜಯಮಾಲಾ ಈ ಹಿಂದೆ 2008 ರಿಂದ 2010 ರ ವರೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ಈಗ 2ನೇ ಬಾರಿಗೆ ಜಯಮಾಲಾ ಅಧ್ಯಕ್ಷೆ ಆಗಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!