ಕಬ್ಜ ತಂಡ ಸೇರಿದ ಲಕ್ಕಿ ಲಕ್ಷ್ಮಣ್

ಬಹುನಿರೀಕ್ಷಿತ ಪ್ಯಾನ್‌ ಇಂಡಿಯಾ ಸಿನಿಮಾ ‘ಕಬ್ಜ’ ದಲ್ಲಿ ಕೆಜಿಎಫ್ ಖ್ಯಾತಿಯ ನಟ ಲಕ್ಕಿ ಲಕ್ಷ್ಮಣ್ ನಟಿಸಲಿದ್ದಾರೆ. ಈ ಬಗ್ಗೆ ನಿರ್ದೇಶಕ ಆರ್ ಚಂದ್ರು ಟ್ವೀಟ್ ಮಾಡಿದ್ದು ಲಕ್ಕಿ ಲಕ್ಷ್ಮಣ್ ಅವರ ಪೋಸ್ಟರ್ ಕೂಡ ಹಂಚಿಕೊಂಡಿದ್ದಾರೆ.
” ಲಕ್ಕಿ ಲಕ್ಷ್ಮಣ್ ಅವರು ನಮ್ಮ ತಂಡ ಸೇರಿರುವುದು ಖುಷಿಯ ವಿಚಾರ. ಅವರ ಜೊತೆ ಕೆಲಸ ಮಾಡುವುದು ಉತ್ಸಾಹದಾಯಕ” ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ಪ್ಯಾನ್ ಇಂಡಿಯಾ ಚಿತ್ರದಲ್ಲಿ ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಇದ್ದಾರೆ. ಅಲ್ಲದೇ ಕಿಚ್ಚ‌ ಸುದೀಪ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಸಿನಿಮಾ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್ ಚಂದ್ರು ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ, ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಇದ್ದಾರೆ.

ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್,ವಿಜಯ್, ಪೀಟರ್ ಹೆನ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಜಗಪತಿ ಬಾಬು, ರಾಹುಲ್ ಜಗತಪ್,ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವಾಬ್ ಶಾ, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಈಗಾಗಲೇ ಬಿಡುಗಡೆ ಆಗಿದ್ದು, ಸಿನಿಮಾ ಪ್ರಿಯರ ಗಮನ ಸೆಳೆದಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!