ಕೆಜಿಎಫ್ ನಲ್ಲಿ ನಡೆದ ರಿಯಲ್ ಘಟನೆಯನ್ನು ಅಧರಿಸಿದ ಕೆಜಿಎಫ್ ಹೆಸರಿನ ಸಿನಿಮಾ ತಮಿಳಿನಲ್ಲಿ ಬರಲಿದೆ.
ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಕೆಜಿಎಫ್ ನಲ್ಲಿ ರಿಯಲ್ ಆಗಿ ನಡೆದ ಸಂಘರ್ಷಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರೆ ಎನ್ನಲಾಗಿದೆ. ಇದೇ ಮೊದಲ ಬಾರಿಗೆ ಕೆಜಿಎಫ್ ಕುರಿತಾಗಿ ರಿಯಲ್ ಆಗಿ ಬರುತ್ತಿರುವ ಸಿನಿಮಾ ತಮಿಳಿನ ಕೆಜಿಎಫ್ ಸಿನಿಮಾವಾಗಿರಲಿದೆ.
ಕೆಜಿಎಫ್ ಸಿನಿಮಾಗೆ ಚಿಯಾನ್ ವಿಕ್ರಮ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇದೊಂದು ಒಳ್ಳೆಯ ಸಿನಿಮಾ ಆಗಲಿದೆ ಎಂದಿದ್ದಾರೆ ವಿಕ್ರಮ್. ಆಸ್ಕರ್ ಪ್ರಶಸ್ತಿಗೆ ಸಲ್ಲಬೇಕಾದ ಸಿನಿಮಾ ಇದಾಗಲಿದೆ ಎಂದೂ ಅವರು ಹೇಳಿದ್ದಾರೆ.
ಪಾ.ರಂಜಿತ್ ದೇಸಿಯ ಕಥೆಗಳನ್ನು ಸಿನಿಮಾ ಮಾಡಿದ ನಿರ್ದೇಶಕ. ಶೋಷಿತರ ನೋವುಗಳನ್ನು ದೃಶ್ಯಕ್ಕೆ ತಂದ ಹೆಗ್ಗಳಿಕೆ ಇವರದ್ದು. ಹಾಗಾಗಿ ಕೆಜಿಎಫ್ ಸಿನಿಮಾ ಹೊಸ ರೀತಿಯೊಂದಿಗೆ ಬರುವುದು ಗ್ಯಾರಂಟಿ ಎಂದು ಹೇಳಲಾಗಿದೆ.
ಯಶ್ ನಟನೆಯ ಕೆಜಿಎಫ್ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಜಿಎಫ್ 3 ಸಿನಿಮಾ ಬರುತ್ತಾ ಎಂದು ಅಭಿಮಾನಿಗಳು ಕಾದು ಕೂತಿದ್ದಾರೆ. ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಸದ್ಯಕ್ಕೆ ಕೆಜಿಎಫ್ 3 ಇಲ್ಲವೆಂದು ಸ್ಪಷ್ಟನೆ ನೀಡಿದ್ದಾರೆ.
____

Be the first to comment