ಗ್ರೀಸ್ ನಲ್ಲಿ ಬಿಡುಗಡೆ ಆಗಲಿದೆ ಕೆಜಿಎಫ್ 2

ಗ್ರೀಸ್​ನಲ್ಲಿ ರಿಲೀಸ್ ಆಗಲಿರುವ ಮೊದಲ ದಕ್ಷಿಣ ಭಾರತದ ಸಿನಿಮಾ ಎಂಬ ಖ್ಯಾತಿಯನ್ನು ಕೆಜಿಎಫ್2 ಪಾತ್ರವಾಗಲಿದೆ.

ಈ ಬಗ್ಗೆ ‘ಹೊಂಬಾಳೆ ಫಿಲ್ಮ್ಸ್’ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಗ್ರೀಸ್​ನಲ್ಲಿ ಚಿತ್ರ ರಿಲೀಸ್ ಆಗಲಿದೆ. ಹಾಗೆಯೇ ಇಟಲಿಯಲ್ಲಿ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಚಿತ್ರ ತೆರೆಕಾಣಲಿದೆ ಎಂದು ಹೇಳಿದೆ.

ರಷ್ಯಾದಲ್ಲೂ ‘ಕೆಜಿಎಫ್ 2’ ರಿಲೀಸ್ ಆಗಲಿದೆ. ಕನ್ನಡ ಸೇರಿದಂತೆ ಎಲ್ಲಾ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಚಿತ್ರ ರಿಲೀಸ್ ಆಗುತ್ತಿರುವುದು ವಿಶೇಷ ಆಗಿದೆ. ರಷ್ಯಾದಲ್ಲಿ ರಷ್ಯನ್ ಸಬ್​ಟೈಟಲ್​ ಮೂಲಕ ಚಿತ್ರವನ್ನು ಪ್ರದರ್ಶನ ಮಾಡಲಾಗುತ್ತಿದೆ.

ಬ್ರಿಟನ್​ನಲ್ಲಿ ‘ಕೆಜಿಎಫ್ 2’ ಟಿಕೆಟ್ ಬುಕ್ಕಿಂಗ್ ಜೋರಾಗಿದ್ದು ಕೇವಲ 12 ಗಂಟೆಗಳಲ್ಲಿ 5,000 ಟಿಕೆಟ್ ಸೇಲ್ ಆಗಿವೆ. ಇದುವರೆಗೆ ಯಾವುದೇ ಭಾರತೀಯ ಚಿತ್ರ ಇಷ್ಟು ದೊಡ್ಡ ಮಟ್ಟದಲ್ಲಿ ಪ್ರಿ-ಬುಕ್ಕಿಂಗ್ ಆಗಿರಲಿಲ್ಲ ಎಂದು ಹೇಳಲಾಗುತ್ತಿದೆ.
ಸದ್ಯ ಚಿತ್ರತಂಡ ದೇಶಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇತ್ತೀಚೆಗೆ ನಾಯಕ ನಟ ಯಶ್ , ಸಂಜಯ್ ದತ್ , ರವೀನಾ ಟಂಡನ್ ಮೊದಲಾದವರು ದೆಹಲಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದರು. ಸದ್ಯ ಚಿತ್ರತಂಡ ಮುಂಬೈಗೆ ತೆರಳಿದ್ದು ಚಿತ್ರದ ಪ್ರಚಾರ ನಡೆಸಲಿದೆ.

ಯಶ್ ನಟನೆಯ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಸಿನಿಮಾದಲ್ಲಿ ದೊಡ್ಡ ತಾರಾಗಣ ಇದ್ದು, ಬಾಲಿವುಡ್​ನ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ನಟಿಸಿದ್ದಾರೆ. ಯಶ್​ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!