ಐಮ್ಯಾಕ್ಸ್ ಥಿಯೇಟರ್ ನಲ್ಲಿ ಕೆಜಿಎಫ್ 2 ರಿಲೀಸ್

ಬಹುನಿರೀಕ್ಷಿತ ಕೆಜಿಎಫ್ 2 ಚಿತ್ರ ಐಮ್ಯಾಕ್ಸ್ ಥಿಯೇಟರ್ ನಲ್ಲಿ ಸಹ ಬಿಡುಗಡೆ ಆಗಲಿದ್ದು ದಾಖಲೆ ನಿರ್ಮಿಸಲಿದೆ.

ಈ ಬಗ್ಗೆ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಪೋಸ್ಟ್ ಮಾಡಿದ್ದಾರೆ. ” ಕೆಜಿಎಫ್ 2 ಚಿತ್ರ ಐಮ್ಯಾಕ್ಸ್ ಚಿತ್ರಮಂದಿರದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಮೊದಲ ಕನ್ನಡ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಆಸಕ್ತರು ಭಾರತಾದ್ಯಂತ ಐಮ್ಯಾಕ್ಸ್ ಚಿತ್ರಮಂದಿರಗಳಲ್ಲಿ ಚಿತ್ರವನ್ನು ನೋಡಿ ಆನಂದಿಸಬಹುದಾಗಿದೆ” ಎಂದು ಅವರು ಹೇಳಿದ್ದಾರೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆ ಆಗುತ್ತಿದೆ. ಯಶ್ ನಟನೆಯ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಚಿತ್ರತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ದೆಹಲಿಯಿಂದ ಚಿತ್ರದ ಪ್ರಚಾರ ಕಾರ್ಯವನ್ನು ಆರಂಭಿಸಲಾಗಿದೆ. ಮುಂಬೈ, ಕೊಚ್ಚಿ, ತಮಿಳು ನಾಡು, ಆಂಧ್ರ-ತೆಲಂಗಾಣ ಸೇರಿದಂತೆ ಕರ್ನಾಟಕದಲ್ಲೂ ಚಿತ್ರದ ಪ್ರಚಾರವನ್ನು ನಡೆಸಲಾಗಿದೆ.

ಸಿನಿಮಾದಲ್ಲಿ ದೊಡ್ಡ ತಾರಾಗಣ ಇದ್ದು, ಬಾಲಿವುಡ್​ನ ನಟ ಸಂಜಯ್ ದತ್​ ಅಧೀರನಾಗಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ರವೀನಾ ಟಂಡನ್​ ಹಲವು ವರ್ಷಗಳ ಬಳಿಕ ಸ್ಯಾಂಡಲ್​ವುಡ್​ಗೆ ಮರಳುತ್ತಿದ್ದಾರೆ. ಬಹುಭಾಷಾ ನಟ ಪ್ರಕಾಶ್ ರಾಜ್​ ನಟಿಸಿದ್ದಾರೆ. ಯಶ್​ಗೆ ನಾಯಕಿಯಾಗಿ ಶ್ರೀನಿಧಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ಚಿತ್ರಕ್ಕೆ ರವಿ ಬಸ್ರೂರು ಸಂಗೀತ, ಭುವನ್ ಗೌಡ ಛಾಯಾಗ್ರಹಣ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!