‘ಖಾಕಿ’ ನಾಳೆ ರಾಜ್ಯಾದ್ಯಂತ ತೆರೆಗೆ

ತರುಣ್ ಟಾಕೀಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ `ಖಾಕಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ನವೀನ್ ರೆಡ್ಡಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ರಿತ್ವಿಕ್ ಮುರಳಿಧರ್ ಸಂಗೀತ ನೀಡಿದ್ದಾರೆ. ಬಾಲಾ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಧನು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯಾಗಿ ತಾನ್ಯ ಹೋಪ್ ನಟಿಸಿದ್ದಾರೆ. ದೇವ್ ಗಿಲ್, ಶಿವಮಣಿ, ಶಶಿ, ಸುಧಾ ಬೆಳವಾಡಿ, ನವ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!