Aditi Prabhudeva : ಫೆ.17ಕ್ಕೆ “ಖೆಯೊಸ್”

ಅದಿತಿ ಪ್ರಭುದೇವ ನಟನೆಯ “ಖೆಯೊಸ್” ಚಿತ್ರ ಕೂಡ ಇದೇ ಫೆಬ್ರವರಿ 17 ರಂದು ತೆರೆಗೆ ಬರುತ್ತಿದೆ.

“ಖೆಯೊಸ್” ಅಂದರೆ ಮನುಷ್ಯ ಮನಸ್ಸಿನಲ್ಲಾಗುವ ಗೊಂದಲ. ಇದು ವೈದ್ಯಕೀಯ ಕಾಲೇಜೊಂದರಲ್ಲಿ ನಡೆಯುವ ಕಥೆ. ನಾಯಕ ಅನಿರೀಕ್ಷಿತವಾಗಿ ಒಂದು ಸಮಸ್ಯೆಗೆ ಸಿಲುಕಿಕೊಳ್ಳುತ್ತಾನೆ. ಆತ ತನ್ನ ಜಾಣ್ಮೆಯಿಂದ ಹೇಗೆ ಆ ಸಮಸ್ಯೆಯಿಂದ ಹೇಗೆ ಪಾರಾಗುತ್ತಾನೆ ಎಂಬುದು ಕಥಾಹಂದರ. ನಾಯಕನಾಗಿ ಅಕ್ಷಿತ್ ಶಶಿಕುಮಾರ್, ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ ಎಂದು ನಿರ್ದೇಶಕ ಜಿ.ವಿ.ಪ್ರಸಾದ್ ಮಾಹಿತಿ ನೀಡಿದ್ದಾರೆ.

ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಅವರು ಕಥೆ ಹೇಳುವಾಗ ನಾನು ಗಡ್ಡ ಬಿಟ್ಡಿದೆ. ನಮ್ಮ ಪಾತ್ರಕ್ಕೆ ಈ ರೀತಿಯ ಗೆಟಪ್ ಬೇಕಿತ್ತು ಎಂದರು.‌ ಎಂಬಿಬಿಎಸ್ ಓದುತ್ತಿರುವ ಹುಡುಗನ ಪಾತ್ರ ನನ್ನದು. ಅದಿತಿ ಪ್ರಭುದೇವ ಸೇರಿದಂತೆ ಎಲ್ಲರೂ ಚೆನ್ನಾಗಿ ಅಭಿನಯಿಸಿದ್ದಾರೆ. ನಮ್ಮ ತಂದೆ ಕೂಡ ಇದರಲ್ಲಿ ನಟಿಸಿದ್ದಾರೆ ಎಂದು ನಾಯಕ ನಟ ಅಕ್ಷಿತ್ ಶಶಿಕುಮಾರ್ ತಿಳಿಸಿದ್ದಾರೆ.

“ಖೆಯೊಸ್” ನಲ್ಲಿ ನಾನು ಕೂಡ ವೈದ್ಯಕೀಯ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದೇನೆ. ಅಕ್ಷಿತ್ ಅವರು ದೊಡ್ಡ ಹೀರೊ ಮಗ ಅಂದುಕೊಳ್ಳದೆ ಎಲ್ಲರೊಂದಿಗೆ ಬೆರೆಯುವ ಗುಣ ಇಷ್ಟವಾಯಿತು ಎಂದು ನಾಯಕಿ ಅದಿತಿ ಪ್ರಭುದೇವ ಹೇಳಿದ್ದಾರೆ.

THE BLACK PEBBLE ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ಪಾರುಲ್ ಅಗರವಾಲ್ ಹಾಗೂ ಹೇಮಚಂದ್ರ ರೆಡ್ಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!