ಕಿರೀಟಿ ಚಿತ್ರದ ಟೈಟಲ್ ಲಾಂಚ್ ಗೆ ಕೌಂಟ್ ಡೌನ್

ಜನಾರ್ದನ ರೆಡ್ಡಿ ಪುತ್ರ ಕಿರೀಟ ನಟನೆಯ ಮೊದಲ ಸಿನಿಮಾದ ಟೈಟಲ್ ಲಾಂಚ್ ಗೆ ಕೌಂಟ್ ಡೌನ್ ಶುರುವಾಗಿದೆ.

ಸದ್ಯಕ್ಕಿರುವ ಮಾಹಿತಿ ಪ್ರಕಾರ ಕಿರೀಟಿ ಅವರ ಹುಟ್ಟು ಹಬ್ಬಕ್ಕಾಗಿ ಸೆಪ್ಟೆಂಬರ್ 29ಕ್ಕೆ ಸಂಜೆ 6.39ಕ್ಕೆ ವಾರಾಹಿ ಚಲನಚಿತ್ರ ಯೂಟ್ಯೂಬ್ ಚಾನೆಲ್ ನಲ್ಲಿ ಕಿರೀಟಿ ಮೊದಲ ಚಿತ್ರದ ಟೈಟಲ್ ಲಾಂಚ್ ವೀಡಿಯೋ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ.

ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಣ ಸಂಸ್ಥೆ ವಾರಾಹಿ ಫಿಲ್ಮಂ ಪ್ರೊಡಕ್ಷನ್ ಬಂಡವಾಳ ಹೂಡಿ ನಿರ್ಮಾಣ ಮಾಡುತ್ತಿದೆ. ಇದು ವಾರಾಹಿ ಸಂಸ್ಥೆಯ 15ನೇ ಸಿನಿಮಾ ಕೂಡ ಆಗಿದೆ. ಅದ್ದೂರಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಯಲ್ಲಿ ನಿರ್ಮಾಣವಾಗುತ್ತಿರೋ ಈ ಚಿತ್ರದ ಮೂಲಕ ಕಿರೀಟಿ ಕನ್ನಡ ಮತ್ತು ತೆಲುಗು ಎರಡೂ ಇಂಡಸ್ಟ್ರಿಗೆ ಏಕಕಾಲದಲ್ಲಿ ಹೀರೋ ಆಗಿ ಲಾಂಚ್ ಆಗ್ತಿದ್ದಾರೆ.

ಚಿತ್ರದಲ್ಲಿ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್ ಮುಖ್, ಶ್ರೀಲೀಲಾ ಸೇರಿದಂತೆ ದೊಡ್ಡ ತಾರಾಬಳಗವೇ ಇದೆ. ಚಿತ್ರದ ತಾಂತ್ರಿಕ ವರ್ಗ ಕೂಡ ಶ್ರೀಮಂತವಾಗಿದೆ. ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ, ಬಾಹುಬಲಿ ಸಿನಿಮಾದ ಕಣ್ಣು ಕೆ ಸೆಂಥಿಲ್ ಕುಮಾರ್ ಛಾಯಾಗ್ರಹಣ, ರವೀಂದರ್ ಕಲಾ ನಿರ್ದೇಶನ, ಭಾರತದ ಟಾಪ್ ಸ್ಟಂಟ್ ಡೈರೆಕ್ಟರ್ ಪೀಟರ್ ಹೆನ್ ಆಕ್ಷನ್ ಚಿತ್ರಕ್ಕಿದೆ.

ಅದ್ಧೂರಿಯಾಗಿ ನಡೆದ ಚಿತ್ರದ ಮುಹೂರ್ತ ಕಾರ್ಯಕ್ರಮದಲ್ಲಿ ರಾಜಮೌಳಿ ಕಿರೀಟಿಗೆ ಸಾಥ್ ನೀಡಿ ಪ್ರೋತ್ಸಾಹಿಸಿದ್ದರು. ಇಂಟ್ರಡಕ್ಷನ್ ಟೀಸರ್ ಮೂಲಕ ಗಮನ ಸೆಳೆದಿರೋ ಕಿರೀಟಿ ಫಸ್ಟ್ ಲುಕ್ ನಲ್ಲೇ ಭರವಸೆ ಮೂಡಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!