ಕಿರು ತೆರೆಯಲ್ಲಿ ಕಾಣಿಸಿಕೊಳ್ಳಲಿರುವ ಪ್ರಜ್ವಲ್ ದೇವರಾಜ್

ಸಾಕಷ್ಟು ನಟರು ಕಿರು ತೆರೆಯಲ್ಲಿ ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ, ನಟ ಪ್ರಜ್ವಲ್ ದೇವರಾಜ್ ಅವರು ಕಿರು ತೆರೆಯಲ್ಲಿ ಡ್ಯಾನ್ಸ್ ಶೋ ಒಂದರ ಜಡ್ಜ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಸ್ಟಾರ್ ಸುವರ್ಣ ಡ್ಯಾನ್ಸ್ ಶೋ ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದರಲ್ಲಿ ಪ್ರಜ್ವಲ್ ದೇವರಾಜ್ ಜಡ್ಜ್ ಆಗಲಿದ್ದಾರೆ. ಡಾನ್ಸ್ ಶೋದ ಪ್ರೋಮೊ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.
ಒಳ್ಳೆಯ ಡ್ಯಾನ್ಸರ್ ಆಗಿರುವ ಪ್ರಜ್ವಲ್ ದೇವರಾಜ್ ಟಿವಿಯವರು ನೀಡಿರುವ ಆಹ್ವಾನವನ್ನು ಖುಷಿಯಿಂದ ಒಪ್ಪಿದ್ದಾರೆ. ಮುಂದಿನ ಕೆಲವೇ ದಿನಗಳಲ್ಲಿ ಕಾರ್ಯಕ್ರಮ ಪ್ರಸಾರ ಆಗಲಿದೆ.

ಪ್ರಜ್ವಲ್ ದೇವರಾಜ್ ಜಡ್ಜ್ ಆಗಲಿರುವ ಡ್ಯಾನ್ಸ್ ಶೋ ವನ್ನು ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ನಿರೂಪಿಸಲಿದ್ದಾರೆ. ಪ್ರಜ್ವಲ್ ದೇವರಾಜ್ ಜೊತೆಗೆ ಇನ್ನೂ ಕೆಲವರು ಜಡ್ಜ್‌ಗಳಿರಲಿದ್ದು ಅವರ ಹೆಸರುಗಳು ಇನ್ನೂ ಬಹಿರಂಗವಾಗಿಲ್ಲ.

ಪ್ರಜ್ವಲ್ ದೇವರಾಜ್ ಅಲ್ಲದೇ ಅವರ ಪತ್ನಿ ರಾಗಿಣಿ ಪ್ರಜ್ವಲ್ ಸಹ ಡ್ಯಾನ್ಸರ್ ಆಗಿದ್ದಾರೆ. ಬಿಡುವಿನ ವೇಳೆಯಲ್ಲಿ ಇಬ್ಬರೂ ಡ್ಯಾನ್ಸ್ ವಿಡಿಯೋ ಬಿಡುಗಡೆ ಮಾಡುತ್ತಿದ್ದು ಇದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪ್ರಜ್ವಲ್ ದೇವರಾಜ್ ನಟನೆಯ ‘ಅರ್ಜುನ್ ಗೌಡ’ ಸಿನಿಮಾ ಈಗಾಗಲೇ ಪೂರ್ಣ ಆಗಿದ್ದು ಬಿಡುಗಡೆಗೆ ತಯಾರಾಗಿದೆ. ‘ಮಾಫಿಯಾ’, ‘ವೀರಂ’, ‘ಠಾಕ್ರೆ’, ‘ಅಬ್ಬರ’ ಇನ್ನೂ ಕೆಲವು ಸಿನಿಮಾಗಳಲ್ಲಿ ಪ್ರಜ್ವಲ್ ದೇವರಾಜ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!