Kishore: ಉರಿಗೌಡ, ನಂಜೇಗೌಡ ಬಗ್ಗೆ ಕಿಶೋರ್ ಹೇಳಿದ್ದೇನು?

ಬಹು ಭಾಷಾನಟ ಕಿಶೋರ್ ಉರಿಗೌಡ ಮತ್ತು ನಂಜೇಗೌಡ ವಿವಾದದ ಕುರಿತು ಖಡಕ್ ಆಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಿಶೋರ್ ಅವರು, ಚುನಾವಣೆ ಸಮಯ ಇದಾಗಿದ್ದು, ಜನರು ಎಚ್ಚರಿಕೆಯಿಂದಿರಬೇಕು ಎಂದು ಸಲಹೆ ನೀಡಿದ್ದಾರೆ.

ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ. ಇದು ಇಂದಿನ ಪ್ರಜಾಪ್ರಭುತ್ವ. ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ? ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ ಎಂದು ಕಿಶೋರ್ ಪ್ರಶ್ನೆ ಮಾಡಿದ್ದಾರೆ.

ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು. ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು ಎಂದು ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು. ಚುನಾವಣೆಯ ಕಾಲವಿದು ಎಚ್ಚರ ಎಂದು ಕಿಶೋರ್ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ಉರಿಗೌಡ, ನಂಜೇಗೌಡ ಚಿತ್ರ ನಿರ್ಮಾಣ ಮಾಡುವುದಾಗಿ ಮುನಿರತ್ನ ಹೇಳಿದ್ದರು. ವಿವಾದದ ಬಳಿಕ ಅದನ್ನು ಕೈ ಬಿಟ್ಟಿದ್ದರು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!