ಬಾಲಿವುಡ್ ಗೆ ಕಿಶೋರ್ ಎಂಟ್ರಿ

ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದ ಕಿಶೋರ್ ಇದೀಗ ಬಾಲಿವುಡ್ ಗೂ ಎಂಟ್ರಿ ಕೊಟ್ಟಿದ್ದಾರೆ.

ವಿಭಿನ್ನ ಪಾತ್ರದ ಮೂಲಕ ಹಿಂದಿ ಚಿತ್ರರಂಗದಲ್ಲಿ ಕಿಶೋರ್ ಕಾಣಿಸಿಕೊಳ್ಳಲು ಸಜ್ಜಾಗಿರುವ ಕಿಶೋರ್, ಉತ್ತರ ಪ್ರದೇಶದ ಲಖನೌನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಈಗಾಗಲೇ ನಾಯಕ, ಖಳನಾಯಕ, ಪೋಷಕ ಪಾತ್ರಗಳ ಮೂಲಕ ರಂಜಿಸಿರುವ ಕಿಶೋರ್, ಹಿಂದಿ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ.

ಕನ್ನಡದ `ರಥಾವರ’ ಚಿತ್ರದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಕಿಶೋರ್ ನಟನೆಯ ರೆಡ್ ಕಾಲರ್ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಕಿಶೋರ್ ಪವರ್ ಫುಲ್ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ತಂಡದ ಬಹುಪಾಲು ಪಾತ್ರವರ್ಗದಲ್ಲಿ ಬೆಂಗಳೂರಿನ ಜನರೇ ಇದ್ದಾರೆ. ದೇಶದ ಇತರ ಭಾಗಗಳ ಕಲಾವಿದರೂ ರೆಡ್ ಕಾಲರ್ ಚಿತ್ರದಲ್ಲಿ ನಟಿಸಲಿದ್ದಾರೆ.

ಕಿಶೋರ್ ಕನ್ನಡದ ಜೊತೆಗೆ ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!