ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಆಂಡ್ ರೋಸಸ್ ” ಚಿತ್ರದಲ್ಲಿ ಖ್ಯಾತ ನಟ ಕಿಶೋರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದ ಇತ್ತೀಚಿಗೆ ಕಿಶೋರ್ ಅವರು ಅಭಿನಯಿಸಿದ ಸನ್ನಿವೇಶಗಳನ್ನು ಬೆಂಗಳೂರಿನಲ್ಲಿ ಚಿತ್ರಿಸಿಕೊಳ್ಳಲಾಗಿದೆ.
ದುನಿಯಾ ಚಿತ್ರದಲ್ಲಿ ಕಿಶೋರ್ ಪೊಲೀಸ್ ಪಾತ್ರ ಮಾಡಿದ್ದರು. ಕಾಂತಾರ ಸಿನಿಮಾದಲ್ಲಿ ಫಾರೆಸ್ಟ್ ಆಫೀಸರ್ ಆಗಿ ಗನ್ ಹಿಡಿದ್ದರು. ಇದೀಗ ಕಿಶೋರ್ “ಗನ್ಸ್ ಆಂಡ್ ರೋಸಸ್ ” ಚಿತ್ರದಲ್ಲಿ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದಾರೆ.
“ಗನ್ಸ್ ಆಂಡ್ ರೋಸಸ್ ” ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೆರಡು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಈ ಚಿತ್ರದಲ್ಲಿ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ಹೀರೋ ಆಗಿ ದ್ದಾಕಾಣಿಸಿಕೊಂಡಿದ್ದಾರೆ. ಯಶ್ವಿಕ ನಿಷ್ಕಲ ಈ ಚಿತ್ರದಲ್ಲಿ ಅರ್ಜುನ್‌ಗೆ ಜೋಡಿ ಆಗಿದ್ದಾರೆ. ಶರತ್ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ, ಆರ್ ಜನಾರ್ದನ್ ಛಾಯಾಗ್ರಹಣ, ಸಂಜೀವ ರೆಡ್ಡಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ಮಲ್ಲೇನಹಳ್ಳಿ ರಾಜು ನಿರ್ಮಾಣ ನಿರ್ವಹಣೆ ಮತ್ತು ಮುನಿರಾಜ್ (ಕಬ್ಜ) ಅವರ ಸಹ ನಿರ್ದೇಶನವಿದೆ.
ಶೋಭ್ ರಾಜ್, ಅವಿನಾಶ್, ಸುಚೇಂದ್ರ ಪ್ರಸಾದ್, ಅಶ್ವಥ್ ನೀನಾಸಂ, ಹರೀಶ್, ಜೀವನ್ ರಿಚಿ, ಅರುಣಾ ಬಾಲರಾಜ್, ಡೈಮಂಡ್ ರಾಜಣ್ಣ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
—-

Be the first to comment