kishore ಕಿಶೋರ್ ಟ್ವಿಟರ್ ಖಾತೆ ಅಮಾನತು

ನಟನೆ ಮೂಲಕ ಅಪಾರ ಮನ್ನಣೆ ಗಳಿಸಿರುವ ನಟ ಕಿಶೋರ್ ಅವರ ಟ್ವಿಟರ್ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಸಂಸ್ಥೆಯ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಖಾತೆಯನ್ನು ಅಮಾನತುಗೊಳಿಸಲಾಗಿದೆ ಎಂದು ಟ್ವಿಟರ್ ಹೇಳಿದೆ.

ಈ ನಡುವೆ ಯಾವ ಕಾರಣಕ್ಕೆ, ಯಾವ ಟ್ವೀಟ್ ಗಾಗಿ ಖಾತೆ ಅಮಾನತು ಮಾಡಲಾಗಿದೆ ಎನ್ನುವುದನ್ನು ಹೇಳಿ ಎಂದು ಅಭಿಮಾನಿಗಳು ಎಲಾನ್ ಮಸ್ಕ್ ಅವರನ್ನು ಟ್ಯಾಗ್ ಮಾಡಿ ಆಗ್ರಹಿಸುತ್ತಿದ್ದಾರೆ.

ಎಲಾನ್ ಮಸ್ಕ್ ಟ್ವಿಟರ್ ಸಿಇಓ ಆದ ಬಳಿಕ ಟ್ವಿಟರ್ ನಲ್ಲಿ ಬದಲಾವಣೆಗಳನ್ನು ತಂದಿದ್ದಾರೆ. ಟ್ವಿಟರ್ ನೀತಿ – ನಿಯಮಗಳು ಈಗ ಮತ್ತಷ್ಟು ಕಠಿಣವಾಗಿದೆ. ಯಾವುದೇ ರೀತಿಯ ಮನೋಭಾವಕ್ಕೆ ಧಕ್ಕೆ ತರುವ ಟ್ವೀಟ್ ಗಳಿದ್ದರೆ, ಆ ಟ್ವಿಟರ್ ಖಾತೆಯನ್ನು ತಕ್ಷಣಕ್ಕೆ ಸ್ಥಗಿತಗೊಳಿಸಲಾಗುತ್ತದೆ.

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ ? ಎನ್ನುವ ಸಾಲುಗಳನ್ನು ಇತ್ತೀಚೆಗೆ ನಟ ಕಿಶೋರ್ ಅವರು ಬರೆದುಕೊಂಡಿದ್ದರು. ಬಹುಶಃ ಇದೇ ಕಾರಣಕ್ಕೆ ಈ ರೀತಿ ಆಗಿರಬಹುದು ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕಿಶೋರ್ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕಾಂತಾರ ಸಿನಿಮಾ ವಿವಾದವಾದಾಗಲೂ ಕಿಶೋರ್ ಪ್ರತಿಕ್ರಿಯಿಸಿದ್ದರು. ನಂಬಿಕೆ ಇರಬೇಕು. ಆದರೆ ಮೂಢನಂಬಿಕೆ ಇರಬಾರದು ಎಂದು ಹೇಳಿದ್ದರು. ಎಲ್ಲ ಒಳ್ಳೆಯ ಸಿನಿಮಾಗಳಂತೆ ಕಾಂತಾರ ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು ಎಂದು ಆತಂಕ ವ್ಯಕ್ತ ಪಡಿಸಿದ್ದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!