ಯಶ್ ನಟನೆಯ ಚಿತ್ರ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್’ನ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.
ಕಿಯಾರಾ ಅಡ್ವಾಣಿ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟರ್ ನ್ನು ಹಂಚಿಕೊಂಡಿದ್ದಾರೆ. ಅವರು ಆಫ್-ಶೋಲ್ಡರ್ ವೆಲ್ವೆಟ್ ಗೌನ್ ಧರಿಸಿ ವೇದಿಕೆಯ ಮೇಲೆ ನಿಂತಿರುವುದನ್ನು ತೋರಿಸಲಾಗಿದೆ. ‘ವಾರ್ 2’ ಚಿತ್ರದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ 34 ವರ್ಷದ ಕಿಯಾರಾ ಅಡ್ವಾಣಿ, ಟಾಕ್ಸಿಕ್ ಚಿತ್ರದಲ್ಲಿ ನಾಡಿಯಾ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಗೀತು ಮೋಹನ್ದಾಸ್ ನಿರ್ದೇಶನದ ‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್’ ಚಿತ್ರವನ್ನು ವಿಎನ್ ಪ್ರೊಡಕ್ಷನ್ಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿವೆ.
‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನಪ್ಸ್’ ಚಿತ್ರ 2026ರ ಮಾರ್ಚ್ 19 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಕೆಜಿಎಫ್: ಚಾಪ್ಟರ್ 2 (2022) ಬಿಡುಗಡೆಯಾದ ನಂತರ ಯಶ್ ಅವರ ಮೊದಲ ಚಿತ್ರ ಇದಾಗಿದೆ. ‘ಟಾಕ್ಸಿಕ್ : ಎ ಫೇರಿಟೇಲ್ ಫಾರ್ ಗ್ರೋನಪ್ಸ್’ ಭಾರತದಲ್ಲಿ ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಂಡ ಮೊದಲ ಚಿತ್ರವಾಗಿದೆ.

—





Be the first to comment