ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ‘ಟಾಕ್ಸಿಕ್’ ಚಿತ್ರಕ್ಕಾಗಿ 15 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಇದು ಕಿಯಾರಾ ಅಡ್ವಾಣಿ ಅವರ ವೃತ್ತಿಜೀವನದ ಅತ್ಯಧಿಕ ಸಂಭಾವನೆ ಎಂದು ವರದಿಯಾಗಿದೆ. ‘ಗೇಮ್ ಚೇಂಜರ್’ ಚಿತ್ರಕ್ಕಾಗಿ ಅವರು ‘7 ಕೋಟಿ ರೂ., ‘ವಾರ್ 2 ‘ಚಿತ್ರಕ್ಕಾಗಿ 13 ಕೋಟಿ ರೂ. ಸಂಭಾವನೆ ಪಡೆದಿದ್ದರು.
ಕೆಲವು ಸಮಯದಿಂದ ಚಿತ್ರಗಳಿಂದ ದೂರವಿದ್ದ ಕಿಯಾರಾ ‘ಟಾಕ್ಸಿಕ್’ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಅವರು ಈ ಚಿತ್ರದ ಮೂಲಕ ಗಮನ ಸೆಳೆಯಲು ರೆಡಿ ಆಗಿದ್ದಾರೆ . ಈ ಚಿತ್ರದ ಹಾಡು ಇಂದು ರಿಲೀಸ್ ಆಗಲಿದೆ. ಇತ್ತೀಚೆಗೆ ಬಿಡುಗಡೆಯಾದ ಫೋಟೋಗಳಲ್ಲಿ ಕಿಯಾರಾ ಸುಂದರವಾಗಿ ಕಾಣುತ್ತಿದ್ದಾರೆ.
‘ಟಾಕ್ಸಿಕ್’ ಸಿನಿಮಾದ ಬಗ್ಗೆ ಈಗಾಗಲೇ ಭಾರಿ ಹೈಪ್ ಸೃಷ್ಟಿ ಆಗಿದೆ. ರಾಕಿಂಗ್ ಸ್ಟಾರ್ ಯಶ್ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ನಾಯಕಿಯಾಗಿ ನಟಿಸಿದ್ದಾರೆ.
ಚಿತ್ರಕ್ಕೆ ಗೀತು ಮೋಹನ್‌ದಾಸ್ ನಿರ್ದೇಶನ ಇದೆ. ಈ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಸುಮಾರು 500 ಕೋಟಿ ರೂಪಾಯಿಗಳ ಬಜೆಟ್‌ನಲ್ಲಿ ಜಂಟಿಯಾಗಿ ನಿರ್ಮಿಸುತ್ತಿವೆ.
—-





Be the first to comment