ಯಶ್ ತಾಯಿ ಪುಷ್ಪಾ ಅರುಣ್ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರವನ್ನು ಸೆಪ್ಟೆಂಬರ್ 5ರಿಂದ ಅಮೇಜಾನ್ ಪ್ರೈಮ್ನಲ್ಲಿ ವೀಕ್ಷಿಸಬಹುದಾಗಿದೆ.
‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಈಗ ಸಿನಿಮಾ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗುತ್ತಿದೆ. ಈ ಚಿತ್ರ ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಾಗಲಿದೆ.
‘ಕೊತ್ತಲವಾಡಿ’ ಚಿತ್ರ ಚಿತ್ರಮಂದಿರಗಳಲ್ಲಿ ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಆದರೆ ಒಟಿಟಿಯಲ್ಲಿ ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಸಿನಿಮಾ ನೋಡಬಹುದಾಗಿದೆ. ಸೆಪ್ಟೆಂಬರ್ 5ರಂದು ಕನ್ನಡದಲ್ಲಿ ಮಾತ್ರ ಪ್ರದರ್ಶನವಾಗಲಿದೆ. ನಂತರದ ದಿನಗಳಲ್ಲಿ ಮಿಕ್ಕ ಭಾಷೆಗಳಲ್ಲಿ ಚಿತ್ರ ವೀಕ್ಷಿಸಬಹುದಾಗಿದೆ.
‘ಕೊತ್ತಲವಾಡಿ’ಚಿತ್ರದಲ್ಲಿ ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಾವ್ಯ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಮಾನಸಿ ಸುಧೀರ್ ನಟಿಸಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ , ಕಾರ್ತಿಕ್ ಎಸ್ ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ ಸಂಯೋಜನೆ ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ಚಿತ್ರಕ್ಕೆ ಇದೆ.
—-





Be the first to comment