ಯಶ್ ತಾಯಿ ಪುಷ್ಪ ಅವರು ನಿರ್ಮಿಸಿರುವ ಚೊಚ್ಚಲ ಚಿತ್ರ ‘ಕೊತ್ತಲವಾಡಿ’ ಆಗಸ್ಟ್ 1ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.
ಪುಷ್ಪ ಅರುಣ್ ಕುಮಾರ್ ತಮ್ಮ ಪಿಎ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆಯಡಿ ‘ಕೊತ್ತಲವಾಡಿ’ ಚೊಚ್ಚಲ ಚಿತ್ರ ನಿರ್ಮಿಸಿದ್ದಾರೆ. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ.
ಶ್ರೀರಾಜ್ ಅವರ ನಿರ್ದೇಶನ ಮೊದಲ ಚಿತ್ರ ಇದಾಗಿದೆ. ಪೃಥ್ವಿ ಅಂಬರ್ ನಾಯಕನಾಗಿ, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಇಲ್ಲಿಯವರೆಗೂ ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿದ್ದ ಪೃಥ್ವಿ ‘ಕೊತ್ತಲವಾಡಿ’ ಚಿತ್ರದಲ್ಲಿ ಮಾಸ್ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ ಅವರಂಥ ಅನುಭವಿ ತಾರಾಬಳಗ ಚಿತ್ರದಲ್ಲಿದೆ. ಈಗಾಗಲೇ ಕೊತ್ತಲವಾಡಿ ಚಿತ್ರ ಟೀಸರ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದೆ.
‘ಕೊತ್ತಲವಾಡಿ’ ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ, ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿದ್ದಾರೆ.
—-





Be the first to comment