ಕೃಷಿ ತಾಪಂಡ ಮನೆಯಲ್ಲಿ ಉದ್ಯಮಿ ಆತ್ಮಹತ್ಯೆ

ನಟಿ ಕೃಷಿ ತಾಪಂಡ  ನಿವಾಸದಲ್ಲಿ ಉದ್ಯಮಿ ವೈಶಾಕ್  ನೇಣು ಬಿಗಿದುಕೊಂಡು ಆತ್ಮಹತ್ಯೆ  ಮಾಡಿಕೊಂಡಿರುವ ಘಟನೆ ಆರ್‌ ಆರ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವೈಶಾಕ್ ಅವರು ಕೃಷಿ ತಾಪಂಡ ಅವರ ಆಪ್ತ ಸ್ನೇಹಿತರಾಗಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಆರ್‌ ಆರ್ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ  ತಿಳಿದು ಬಂದಿಲ್ಲ.

ಘಟನೆ ನಡೆದ  ವೇಳೆ ಕೃಷಿ ತಾಪಂಡ ಅವರು ನೆಲಮಂಗಲದಲ್ಲಿದ್ದರು ಎನ್ನಲಾಗಿದೆ.  ವೈಶಾಖ್ ಹಲವು ಬಾರಿ ಕೃಷಿಗೆ ಕರೆ ಮಾಡಿದ್ದರೂ ಅವರು ಕರೆ ಸ್ವೀಕರಿಸಿರಲಿಲ್ಲ.  ರಾತ್ರಿ ಸುಮಾರು 8.30ರ ವೇಳೆಗೆ ‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂಬ ಸಂದೇಶವನ್ನು ವೈಶಾಖ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೆಸೇಜ್ ನೋಡಿದ ತಕ್ಷಣ ಕೃಷಿ ತಾಪಂಡ ಅವರು ವೈಶಾಖ್ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕುಟುಂಬಸ್ಥರು ಹಾಗೂ ಆಪ್ತರು ಆರ್‌ಆರ್ ನಗರದ ಬಿ ಬ್ಲಾಕ್‌ನ ನಾಲ್ಕನೇ ಮಹಡಿಯ 403ನೇ ಫ್ಲಾಟ್‌ಗೆ ತೆರಳಿ ಪರಿಶೀಲನೆ ನಡೆಸುವಷ್ಟರಲ್ಲಿ ವೈಶಾಖ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೂ ಮುನ್ನ ವೈಶಾಖ್ ಮತ್ತು ಕೃಷಿ ತಾಪಂಡ ನಡುವೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. “ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗೋಣ ಬಾ” ಎಂದು ವೈಶಾಖ್ ಹೇಳಿದ್ದರು.  “ಆಯ್ತು, ನಾನು ಬರುತ್ತೇನೆ” ಎಂದು ಕೃಷಿ ಉತ್ತರಿಸಿದ್ದರು ಎಂದು ತಿಳಿದು ಬಂದಿದೆ.

ಆದರೆ ಬಳಿಕ ಸಂಪರ್ಕ ಕಡಿತಗೊಂಡಿದ್ದು, ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆಗೆ ಕೃಷಿ ತಾಪಂಡ ಮನೆಗೆ ಆಗಮಿಸಿ ನೋಡಿದಾಗ ವೈಶಾಖ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ತಕ್ಷಣವೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ವೈಶಾಖ್ ಮೊಬೈಲ್ ಕರೆ ವಿವರಗಳು, ಸಂದೇಶಗಳು ಹಾಗೂ ಇತರ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!