ಆಗಸ್ಟ್‌ 15 ರಂದು ‘ಕೃಷ್ಣಂ ಪ್ರಣಯ ಸಖಿ’ ರಿಲೀಸ್

ಗೋಲ್ಡನ್ ಸ್ಟಾರ್ ಗಣೇಶ್ ಮೂವಿ ‘ಕೃಷ್ಣಂ ಪ್ರಣಯ ಸಖಿ’ ಯನ್ನು ಆಗಸ್ಟ್‌ 15 ರಂದು ರಾಜ್ಯಾದ್ಯಂತ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ.

‘ಕೃಷ್ಣಂ ಪ್ರಣಯ ಸಖಿ’  ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಶ್ರೀನಿವಾಸ್ ರಾಜು ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ. ತ್ರಿಶೂಲ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಿಂದ ಪ್ರಶಾಂತ್ ಜಿ ರುದ್ರಪ್ಪ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಸಿನಿಮಾ.  ಗಣೇಶ್‌ಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ಸಿನಿಮಾದಲ್ಲಿದ್ದಾರೆ.  ಸಿನಿಮಾದಲ್ಲಿ ಗಣೇಶ್ ಜೊತೆಗೆ ಸುಪ್ರೀಂ ಹೀರೋ ಶಶಿಕುಮಾರ್ ಕಾಣಿಸಿಕೊಂಡಿದ್ದಾರೆ.

”ಚಿತ್ರದಲ್ಲಿ ಅರ್ಜುನ್ ಜನ್ಯ ಅವರು ಸಂಗೀತ ಸಂಯೋಜಿಸಿರುವ ಒಟ್ಟು ಏಳು ಹಾಡುಗಳಿವೆ. ಆ ಪೈಕಿ ಎರಡನೇ ಹಾಡು ಬಿಡುಗಡೆಯಾಗಿದೆ‌. ಮೈಸೂರಿನಲ್ಲಿ ಬಿಡುಗಡೆಯಾದ ಮೊದಲ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ” ಎಂದು ನಿರ್ದೇಶಕ ಶ್ರೀನಿವಾಸರಾಜು ಮಾಹಿತಿ ಹಂಚಿಕೊಂಡಿದ್ದಾರೆ.

“ಅರ್ಜುನ್ ಜನ್ಯ ಅವರ ಸಂಗೀತ, ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಅವರ ಗಾಯನ, ಶೇಖರ್ ಮಾಸ್ಟರ್ ಅವರ ನೃತ್ಯ ನಿರ್ದೇಶನ ಹಾಗೂ ವೆಂಕಟ್ ರಾಮಪ್ರಸಾದ್ ಅವರ ಛಾಯಾಗ್ರಹಣ ಎಲ್ಲವೂ ಸೊಗಸಾಗಿದೆ. ಈ ಚಿತ್ರದಲ್ಲಿ ಹಿರಿಯ ನಟ ಶಶಿಕುಮಾರ್ ಅವರ ಜೊತೆ ನಟಿಸಿದ್ದು ಖುಷಿಯಾಗಿದೆ” ಎಂದು ಗೋಲ್ಡನ್ ಸ್ಟಾರ್ ಗಣೇಶ್ ಹೇಳಿದ್ದಾರೆ.

‘ಬಾನದಾರಿಯಲಿ’ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ನಟಿಸುತ್ತಿರುವ ಅದ್ಧೂರಿ ಸಿನಿಮಾ ‘ಕೃಷ್ಣಂ ಪ್ರಣಯ ಸಖಿ’. ಗಣೇಶ್  ಫ್ಯಾಮಿಲಿ ಸಬ್ಜೆಕ್ಟ್ ಜೊತೆ ಸಿನಿಪ್ರಿಯರನ್ನು ಸೆಳೆಯುವುದಕ್ಕೆ ಹೊರಟಿದ್ದಾರೆ. ಈಗಾಗಲೇ ‘ಕೃಷ್ಣಂ ಪ್ರಣಯ ಸಖಿ’ ಸಿನಿಮಾದ ಭರ್ಜರಿ ಪ್ರಚಾರ ಕೂಡ ಆರಂಭ ಆಗಿದೆ.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!