ಅಲೋಕ್ ದುರ್ಗಾಪ್ರಸಾದ್ ಅವರ ನಿರ್ದೇಶನದ ‘ಕುಡ್ಲ ನಮ್ದು ಊರು’ ಚಿತ್ರದಲ್ಲಿ ಅವರೇ ನಾಯಕನಾಗಿಯೂ ನಟಿಸಿದ್ದಾರೆ. ಜೊತೆಗೆ ಈ ಚಿತ್ರವು ಅವರದೇ ನಿರ್ಮಾಣ ಸಂಸ್ಥೆ ಕೃತಾರ್ಥ ಪ್ರೊಡಕ್ಷನ್ಸ್ ಲಾಂಛನದಡಿ ನಿರ್ಮಾಣವಾಗಿದೆ.
ಇತ್ತೀಚೆಗೆ ಚಿತ್ರದ ಆಡಿಯೋ ಮತ್ತು ಟ್ರೈಲರ್ ಬಿಡುಗಡೆ ಸಮಾರಂಭವು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಚಲನಚಿತ್ರ ನಿರ್ಮಾಪಕ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ ವಿಶ್ವನಾಥ್ ಮತ್ತು ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್ ಅವರು ಚಿತ್ರತಂಡವನ್ನು ಅಭಿನಂದಿಸಿ ಶುಭ ಹಾರೈಸಿದರು.
ತುಳುನಾಡಿನ ಸುಂದರ ಪ್ರಕೃತಿ ಮತ್ತು ಸಂಸ್ಕೃತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು ನಿರ್ಮಾಣವಾಗಿರುವ ಈ ಚಿತ್ರವು ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ ಎಂದು ನಿರ್ದೇಶಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಪೂರ್ಣಗೊಂಡಿದ್ದು ಚಿತ್ರ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
Be the first to comment