ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ – ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಗೂ ರಾಮ್ ನಾರಾಯಣ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ. ಮನು ಛಾಯಾಗ್ರಹಣ, ದೀಪಕ್ ಸಂಕಲನ, ವಿನೋದ್, ಮಾಸ್ ಮಾದ, ನರಸಿಂಹ ಸಾಹಸ ನಿರ್ದೇಶನ ಹಾಗೂ ಅನಿಲ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ, ತಬಲ ನಾಣಿ, ಹರೀಶ್ ರಾಜ್, ಕರಿ ಸುಬ್ಬು ಡ್ರ್ಯಾಗನ್ ಮಂಜು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment