“ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ “ಮನಸು ಹಾಡ್ತಿದೆ ವಯಸ್ಸು ಕಾಡ್ತದೆ” ಎಂಬ ಹಾಡು ಗಜರಾಜನಿಂದ ಬಿಡುಗಡೆಯಾಗಿದೆ.
ಇದೇ ಮೊದಲ ಬಾರಿಗೆ ಆನೆಯೊಂದು ಚಿತ್ರದ ಹಾಡನ್ನು ಅನಾವರಣ ಮಾಡಿದೆ. ಯೋಗರಾಜ್ ಭಟ್ ಬರೆದ ಸುಂದರ ಯುಗಳಗೀತೆ ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಏಪ್ರಿಲ್ 6ರಂದು ಬೆಳಗ್ಗೆ 10ಗಂಟೆಗೆ ಬಿಡುಗಡೆಯಾಗಲಿದೆ.
ಮನೋಮೂರ್ತಿ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಚಿತ್ರದ ಮೊದಲ ಹಾಡು “ನಮ್ ಪೈಕಿ ಒಬ್ಬ ಹೋಗ್ಬುಟ್ನಾ” ಜನರ ಮನ ತಲುಪಿದೆ.
ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ, ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದ “ಕುಲದಲ್ಲಿ ಕೀಳ್ಯಾವುದೋ” ಫಸ್ಟ್ ಲುಕ್ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ.
ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ. ನಿರಂಜನ್ ಬಾಬು ಅವರ ಛಾಯಾಗ್ರಹಣ ಚಿತ್ರಕ್ಕಿದೆ.

Be the first to comment