ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಡಾ. ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್‌ ಅವರ ವಿಶೇಷ ಫಲಪುಷ್ಪಕ್ಕೆ ಸಿದ್ದತೆ.

ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಲಾಲ್ ಬಾಗ್ ನಲ್ಲಿ ಆಗಸ್ಟ್ 5 ರಿಂದ 15 ರವರೆಗೂ ನಡೆಯಲಿದೆ. ಈ ಬಾರಿ ಕರ್ನಾಟಕ ರತ್ನ ಡಾ. ರಾಜಕುಮಾರ್ ಹಾಗೂ ಡಾ. ಪುನೀತ್ ರಾಜಕುಮಾರ್ ರವರ ವಿಷಯಾಧಾರಿತ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 5ರಂದು ಫಲಪುಷ್ಪ ಪ್ರದರ್ಶನವು ಉದ್ಘಾಟನೆಗೊಳ್ಳಲಿದ್ದು ಖ್ಯಾತ ಚಿತ್ರನಟರಾದ, ಡಾ.ಶಿವರಾಜಕುಮಾರ್ ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ರಾಜಕುಮಾರ್ ರವರ ಧರ್ಮಪತ್ನಿ ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ರವರನ್ನು ಇಂದು ಫಲಪುಷ್ಪ ಪ್ರದರ್ಶನಕ್ಕೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಲು ಕರ್ನಾಟಕ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಆತ್ಮೀಯವಾಗಿ ವಿನಂತಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಾನ ಕಲಾಸಂಘದ ಉಪಾಧ್ಯಕ್ಷರಾದ ಶ್ರೀ ವಾಸುದೇವ್. ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ. ಎಂ ಜಗದೀಶ್ ಹಾಗೂ ಲಾಲ್ ಬಾಗ್ ತೋಟಗಾರಿಕೆ ಉಪನಿರ್ದೇಶಕರಾದ ಶ್ರೀಮತಿ ಜಿ ಕುಸುಮ ಹಾಗೂ ದಿನಿ ಸಿನಿ ಕ್ರಿಯೇಷನ್ಸ್ ನ ದಿನೇಶ್ ರವರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published. Required fields are marked *

Translate »
error: Content is protected !!