“ಲಾಫಿಂಗ್ ಬುದ್ಧ” ಈ ವಾರ ತೆರೆಗೆ

ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ.

ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ಎಂ ಭರತ್ ರಾಜ್ ನಿರ್ದೇಶನದ “ಲಾಫಿಂಗ್ ಬುದ್ಧ” ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್  ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಲಾಫಿಂಗ್ ಬುದ್ಧ

ಪೊಲೀಸರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ಕಥೆಗೆ ಒಂದು ತಿರುವು ಸಿಗುವ ವಿಭಿನ್ನಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ಸುಂದರರಾಜ್  ತಾರಾಬಳಗದಲ್ಲಿದ್ದಾರೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ.

ಚಿತ್ರಕ್ಕೆ ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ ಇದೆ.

ಲಾಫಿಂಗ್ ಬುದ್ಧ

Be the first to comment

Leave a Reply

Your email address will not be published. Required fields are marked *

Translate »
error: Content is protected !!