Laughing Buddha: ‘ಲಾಫಿಂಗ್ ಬುದ್ಧ’ ಶೂಟಿಂಗ್ ಶುರು

ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ಸಿನೆಮಾ ಚಿತ್ರೀಕರಣ ಇಂದಿನಿಂದ ಪ್ರಾರಂಭ ಆಗಿದೆ.

ಎಂದಿನಂತೆ ನಿಮ್ಮ ಆರ್ಶೀವಾದ ತಂಡದ ಮೇಲಿರಲಿ ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ.

ಎಂ ಭರತ್ ರಾಜ್ ನಿರ್ದೇಶನದ ಕಾಮಿಡಿ ಎಂಟರ್‌ಟೈನರ್ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಮತ್ತು ತೇಜು ಬೆಳವಾಡಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಲಾಫಿಂಗ್ ಬುದ್ಧ ಸಿನಿಮಾ ಪೊಲೀಸ್ ಪೇದೆಯ ಸುತ್ತುತ್ತದೆ.ದೇಹದ ತೂಕ ಹೆಚ್ಚಿರುವ ಪೊಲೀಸ್ ಕಾನ್‌ಸ್ಟೇಬಲ್ ಹೇಗೆ ಜನರ ಉತ್ಸಾಹವನ್ನು ಹೆಚ್ಚಿಸುತ್ತಾರೆ. ಇಡೀ ಪೊಲೀಸ್ ಠಾಣೆಗೆ ಸಂತೋಷವನ್ನು ತರುತ್ತಾರೆ ಎಂಬುದೇ ಚಿತ್ರದ ಕಥೆ. ಹಾಸ್ಯದ ಜತೆಗೆ ಭಾವನಾತ್ಮಕ ದೃಶ್ಯಗಳು ಸಹ ಸಿನಿಮಾದಲ್ಲಿ ಇರಲಿವೆ.

ಕಾಫಿ ಗ್ಯಾಂಗ್ ಸ್ಟುಡಿಯೋಸ್ ಸಹಯೋಗದಲ್ಲಿ ರಿಷಬ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಶ್ರೀಕಾಂತ್ ಮತ್ತು ವಿಕಾಸ್ ಸಹ ನಿರ್ಮಾಪಕರಾಗಿದ್ದಾರೆ.

ವಿಷ್ಣು ವಿಜಯ್ ಸಂಗೀತ, ಚಂದ್ರಶೇಖರ್ ಛಾಯಾಗ್ರಹಣ ಮತ್ತು ಕೆಎಂ ಪ್ರಕಾಶ್ ಅವರ ಸಂಕಲನ ಚಿತ್ರಕ್ಕಿರಲಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!