ಎಂ.ಎಸ್‌.ಸತ್ಯುಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಎಂಎಸ್‌ ಸತ್ಯು (91) ಅವರನ್ನು ಆಯ್ಕೆ ಮಾಡಲಾಗಿದೆ.

ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಲಾಗಿದೆ.

ಕಲಾ ನಿರ್ದೇಶಕರಾಗಿ ಎಂಎಸ್‌ ಸತ್ಯು ಅವರು ನಿರ್ದೇಶಿಸಿದ ಮೊದಲ ಚಿತ್ರವಾದ ಹಕೀಕತ್ ‘ಫಿಲ್ಮ್ ಫೇರ್ ಪ್ರಶಸ್ತಿ’ಯನ್ನು ಪಡೆದಿತ್ತು. ‘ದಾರಾಶೀಕೋ’ ನಾಟಕ ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದೆ.

ಎಂಎಸ್‌ ಸತ್ಯು ನಿರ್ದೇಶನದ ಹಿಂದಿ ಚಿತ್ರ ಗರಂ ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದೆ. ಕನ್ನಡದ ಚಿತ್ರ ‘ಬರ’ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿದೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವದ ಕೊನೆಯ ದಿನವಾದ ಮಾರ್ಚ್ 7ರಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ‌.

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!