ರಿಮೇಕ್ ಆಗಲಿದೆ ‘ಲವ್ 360’ ಸಿನಿಮಾ

ನಿರ್ದೇಶಕ ಶಶಾಂಕ್ ಅವರ ರೊಮ್ಯಾಂಟಿಕ್ ಡ್ರಾಮಾ, ಲವ್ 360 ಸಿನಿಮಾ ಈಗ ತಮಿಳು ಮತ್ತು ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ.

ಈ ಚಿತ್ರ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಎಂದು ಶಶಾಂಕ್ ತಿಳಿಸಿದ್ದಾರೆ.

ಚಿತ್ರದ ಯಶಸ್ಸಿಗೆ ಕನ್ನಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿರುವ ನಿರ್ದೇಶಕ ಶಶಾಂಕ್ , ಚಿತ್ರವನ್ನು ಎರಡು ಭಾಷೆಗಳಲ್ಲಿ ರೀಮೇಕ್ ಮಾಡಲು ನಿರ್ಮಾಣ ಸಂಸ್ಥೆಯೊಂದು ಆಸಕ್ತಿ ತೋರಿಸಿದೆ ಎಂದು ತಿಳಿಸಿದ್ದಾರೆ.

ಪ್ರವೀಣ್ ಮತ್ತು ರಚನಾ ಇಂದರ್ ಅಭಿನಯದ ಚೊಚ್ಚಲ ಚಿತ್ರ ಇದಾಗಿದ್ದು, ಹಲವು ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಂಡಿದೆ.

ಲವ್ 360 ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದೆ. ಸಿದ್ ಶ್ರೀರಾಮ್ ಹಾಡಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಯೋಜಿಸಿದ ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್​ನಲ್ಲಿ 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡ ಹೆಗ್ಗಳಿಕೆಗೆ ಪಾತ್ರವಾಗಿದೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!