ನಿರ್ದೇಶಕ ಶಶಾಂಕ್ ಅವರ ರೊಮ್ಯಾಂಟಿಕ್ ಡ್ರಾಮಾ, ಲವ್ 360 ಸಿನಿಮಾ ಈಗ ತಮಿಳು ಮತ್ತು ತೆಲುಗಿನಲ್ಲಿ ರಿಮೇಕ್ ಆಗುತ್ತಿದೆ.
ಈ ಚಿತ್ರ ತಮಿಳು ಮತ್ತು ತೆಲುಗಿಗೆ ರಿಮೇಕ್ ಆಗಲಿದೆ ಎಂದು ಶಶಾಂಕ್ ತಿಳಿಸಿದ್ದಾರೆ.
ಚಿತ್ರದ ಯಶಸ್ಸಿಗೆ ಕನ್ನಡ ಪ್ರೇಕ್ಷಕರಿಗೆ ಧನ್ಯವಾದ ಅರ್ಪಿಸಿ ಟ್ವೀಟ್ ಮಾಡಿರುವ ನಿರ್ದೇಶಕ ಶಶಾಂಕ್ , ಚಿತ್ರವನ್ನು ಎರಡು ಭಾಷೆಗಳಲ್ಲಿ ರೀಮೇಕ್ ಮಾಡಲು ನಿರ್ಮಾಣ ಸಂಸ್ಥೆಯೊಂದು ಆಸಕ್ತಿ ತೋರಿಸಿದೆ ಎಂದು ತಿಳಿಸಿದ್ದಾರೆ.
ಪ್ರವೀಣ್ ಮತ್ತು ರಚನಾ ಇಂದರ್ ಅಭಿನಯದ ಚೊಚ್ಚಲ ಚಿತ್ರ ಇದಾಗಿದ್ದು, ಹಲವು ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ.
ಲವ್ 360 ಚಿತ್ರಕ್ಕೆ ಉತ್ತಮ ವಿಮರ್ಶೆ ಸಿಕ್ಕಿದೆ. ಸಿದ್ ಶ್ರೀರಾಮ್ ಹಾಡಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಯೋಜಿಸಿದ ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್ನಲ್ಲಿ 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡ ಹೆಗ್ಗಳಿಕೆಗೆ ಪಾತ್ರವಾಗಿದೆ.
___





Be the first to comment