Love birds ಲವ್ ಬರ್ಡ್ಸ್ ಟೀಸರ್ ರಿಲೀಸ್

ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ನಟನೆಯ ‘ಲವ್ ಬರ್ಡ್ಸ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ನಾಯಕ, ನಾಯಕಿಯ ಪಾತ್ರವನ್ನು ಪರಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ನಟರಾದ ವಿಜಯ ರಾಘವೇಂದ್ರ ಹಾಗೂ ಅಜಯ್ ರಾವ್ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಲಾಕ್ ಡೌನ್ ಸಮಯದಲ್ಲಿ ಬರೆದ ಕಥೆಯಿದು. ಮದುವೆಯಾದ ನನ್ನ ಸ್ನೇಹಿತರು ಹಂಚಿಕೊಳ್ಳುತ್ತಿದ್ದ ಕೆಲವು ವಿಷಯಗಳು ಈ ಕಥೆ ಬರೆಯಲು ಸ್ಪೂರ್ತಿ. ಕಥೆ ಬರೆಯಬೇಕಾದರೆ ಕೃಷ್ಣ, ಮಿಲನ ನಾಗರಾಜ್ ಅವರೇ ನಾಯಕ-ನಾಯಕಿ ಎಂದು ನಿರ್ಧರಿಸಿದ್ದೆ. ಬಳಿಕ ನಿರ್ಮಾಪಕ ಚಂದ್ರು ಅವರಿಗೆ ಕಥೆ ಹೇಳಿದೆ. ಅವರು ಚಿತ್ರ ಮಾಡಲು ಮುಂದಾದರು. ಚಿತ್ರತಂಡದ ಸಹಕಾರದಿಂದ “ಲವ್ ಬರ್ಡ್ಸ್” ಚಿತ್ರ ಚೆನ್ನಾಗಿ ಬಂದಿದೆ. ನಿಮ್ಮೆಲ್ಲರ ಸಹಕಾರವಿರಲಿ ಎಂದರು ನಿರ್ದೇಶಕ ಪಿ.ಸಿ.ಶೇಖರ್.

“ಲವ್ ಮಾಕ್ಟೇಲ್” ಚಿತ್ರದ ನಂತರ ಮಾಡಿರುವ ಚಿತ್ರವಿದು. ಅದರಲ್ಲಿ ಆದಿ ಹಾಗೂ ನಿಧಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೆವು. ಇದರಲ್ಲಿ ದೀಪಕ್ – ಪೂಜಾ ಪಾತ್ರದಲ್ಲಿ ಅಭಿನಯಿಸಿದ್ದೇವೆ. ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳು ಚೆನ್ನಾಗಿದೆ. ಪಿ.ಸಿ.ಶೇಖರ್ ಚಿತ್ರವನ್ನು ಚೆನ್ನಾಗಿ ಮಾಡಿದ್ದಾರೆ. ನಿರ್ಮಾಪಕ ಚಂದ್ರು ಅವರಿಗೆ ಧನ್ಯವಾದ ಎಂದರು ಡಾರ್ಲಿಂಗ್ ಕೃಷ್ಣ.

ಪಿ.ಸಿ.ಶೇಖರ್ ಸುಂದರವಾದ ಕಥೆ ಬರೆದಿದ್ದಾರೆ. “ಲವ್ ಬರ್ಡ್ಸ್” ಚಿತ್ರದಲ್ಲಿ ಲವ್ ಅಷ್ಟೇ ಅಲ್ಲ. ಬೇರೆ ವಿಷಯಗಳು ಇದೆ. ಎಲ್ಲರೂ ಚಿತ್ರ ನೋಡಿ ಪ್ರೋತ್ಸಾಹ ನೀಡಿ ಎಂದು ಮಿಲನ ನಾಗರಾಜ್ ಕೋರಿದರು.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!