‘ಲವ್ ಲಿ’ ಸೆಕೆಂಡ್ ಶೆಡ್ಯೂಲ್ ಶೂಟಿಂಗ್

ಪ್ರತಿಭಾನ್ವಿತ ನಟ ವಸಿಷ್ಠ ಸಿಂಹ ಅಭಿನಯದ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣದಲ್ಲಿ ಚಿತ್ರತಂಡ ನಿರತವಾಗಿದೆ.

ನಾಗರಭಾವಿಯ ಕಿಂಗ್ಸ್ ಕ್ಲಬ್ ನಲ್ಲಿ ‘ಲವ್ ಲಿ’ ಚಿತ್ರದ ಸೆಕೆಂಡ್ ಶೆಡ್ಯೂಲ್ ಚಿತ್ರೀಕರಣ ನಡೆಯುತ್ತಿದೆ. ಕಿಂಗ್ಸ್ ಕ್ಲಬ್ ನಲ್ಲಿ ಆಫೀಸ್ ಸೆಟ್ ನಿರ್ಮಾಣ ಮಾಡಲಾಗಿದ್ದು ವಸಿಷ್ಠ ಸಿಂಹ, ಸಾಧುಕೋಕಿಲ, ನಟಿ ಸಮೀಕ್ಷಾ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ನಿರ್ದೇಶನವಿದೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ.

ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ನಟಿಸುತ್ತಿದ್ದಾರೆ. ಕೊರಿಯನ್ ವೆಬ್ ಸೀರೀಸ್, ತಮಿಳು, ಹಿಂದಿ ಸಿನಿಮಾಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ ಆಗಿದೆ.

ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಕೂಡ ಲವ್ ಲಿ ಚಿತ್ರತಂಡ ಸೇರಿಕೊಂಡಿದ್ದಾರೆ. ಸುಬ್ಬಲಕ್ಷ್ಮಿ ಸಂಸಾರ ಸೀರಿಯಲ್ ಖ್ಯಾತಿಯ ಸಮೀಕ್ಷಾ ಲವ್ ಲಿ ಚಿತ್ರದಲ್ಲಿ ಪ್ರಮುಖ ರೋಲ್ ನಲ್ಲಿ ಮಿಂಚಲಿದ್ದಾರೆ.

ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!