ಭಾರೀ ಚರ್ಚೆಗೆ ಕಾರಣವಾಗಿದ್ದ ‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ ಕಂಡಿದೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಸಭೆಯಲ್ಲಿ ‘ಲವ್ ಮಾಕ್ಟೇಲ್ 3’ ಕಥೆ ವಿವಾದಕ್ಕೆ ತೆರೆ ಬಿದ್ದಿದೆ. ಮಾರ್ಚ್ 27ರಂದು ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೃಷ್ಣ, ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಸೇರಿದಂತೆ ಪ್ರಮುಖರು ಭಾಗವಹಿಸಿ ತಮ್ಮ ವಾದ ಮಂಡಿಸಿದರು. ನಂತರ ಇಬ್ಬರೂ ಒಂದೇ ಘಟನೆಯಿಂದ ಸ್ಫೂರ್ತಿ ಪಡೆದಿದ್ದರೂ, ಕಥೆ ಮತ್ತು ಚಿತ್ರಕಥೆ ಸಂಪೂರ್ಣ ಭಿನ್ನವಾಗಿವೆ ಎಂಬ ನಿರ್ಣಯ ಕೈಗೊಳ್ಳಲಾಯಿತು.
ರಾಘವೇಂದ್ರ ನಾಯ್ಕ್ ‘ಲವ್ ಮಾಕ್ಟೇಲ್ 3’ ಕಥೆ ತಮ್ಮದು ಎಂದು ಆರೋಪ ಮಾಡಿದ್ದರು. ಅದನ್ನು ಕೃಷ್ಣ ತಳ್ಳಿಹಾಕಿ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಸಿದ್ದರು. ಸುದ್ದಿಗೋಷ್ಠಿಯಲ್ಲಿ ಗುರು ದೇಶಪಾಂಡೆ, ಕೃಷ್ಣ ನಡುವೆ ತೀವ್ರ ವಾಗ್ವಾದ ನಡೆದಿತ್ತು.
ಸಭೆಯಲ್ಲಿ ಕೃಷ್ಣ ಅವರು ಗುರು ದೇಶಪಾಂಡೆ ವಿರುದ್ಧ ಮಾಡಿದ ವೈಯಕ್ತಿಕ ಹೇಳಿಕೆಗಳಿಗೆ ಕ್ಷಮೆ ಕೇಳಿದರು. ಈ ಮೂಲಕ ಹಲವು ದಿನಗಳಿಂದ ಮುಂದುವರಿದಿದ್ದ ‘ಲವ್ ಮಾಕ್ಟೇಲ್ 3’ ಕಥೆ ವಿವಾದಕ್ಕೆ ತೆರೆ ಬಿದ್ದಿದೆ.
ಆರೋಪ ಮಾಡಿದ ರಾಘವೇಂದ್ರ ನಾಯ್ಕ್ ಅವರ ‘ಕೂಡಲಸಂಗಮ’ ಪ್ರಾಜೆಕ್ಟ್ ಮುಂದುವರಿಯುತ್ತದೆಯೇ ಎಂಬ ಕುತೂಹಲ ಇದೆ.
—-





Be the first to comment