ಲಕ್ಕಿ ಮ್ಯಾನ್​’ ಮೂಲಕ ತೆರೆಗೆ ಬರುತ್ತಿದ್ದಾರೆ ಅಪ್ಪು

ಪುನೀತ್ ರಾಜ್ ಕುಮಾರ್ ಅವರು ಪ್ರಭುದೇವ ಮತ್ತು ಡಾರ್ಲಿಂಗ್​ ಕೃಷ್ಣ ಅವರ ಜೊತೆ ನಟಿಸಿರುವ ‘ಲಕ್ಕಿ ಮ್ಯಾನ್​’ ಚಿತ್ರದ ಶೂಟಿಂಗ್​ ಪೂರ್ಣಗೊಂಡಿದ್ದು, ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ.

ಡಿಸೆಂಬರ್​ ಅಥವಾ ಜನವರಿಯಲ್ಲಿ ‘ಲಕ್ಕಿ ಮ್ಯಾನ್’ ಬಿಡುಗಡೆ ಮಾಡುವ ಗುರಿ ಹೊಂದಲಾಗಿದೆ. ಚಿತ್ರ ಬಿಡುಗಡೆಗೆ ಪೂರಕವಾಗಿ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ಚಿತ್ರತಂಡ ತಿಳಿಸಿದೆ.

‘ಲಕ್ಕಿ ಮ್ಯಾನ್​’ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಹೀರೋ ಆಗಿದ್ದರೂ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪುನೀತ್ ರಾಜ್​ಕುಮಾರ್ ಹಾಗೂ ಪ್ರಭುದೇವ ಅವರು ಹಾಡೊಂದರಲ್ಲಿ ಜೊತೆಯಾಗಿ ಹೆಜ್ಜೆ ಹಾಕಿದ್ದಾರೆ. ಡಾ. ರಾಜ್​ಕುಮಾರ್ ಅವರ ಮೇಲೆ ರಚಿಸಲಾದ ಈ ಹಾಡಿನಲ್ಲಿ ಅವರಿಬ್ಬರು ಡ್ಯಾನ್ಸ್​ ಮಾಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೇ ಮೊದಲ ಬಾರಿಗೆ ಇವರಿಬ್ಬರೂ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ ಎನ್ನುವುದು ವಿಶೇಷ ಆಗಿದೆ.

ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಸಂಗೀತಾ ಶೃಂಗೇರಿ, ರೋಶಿನಿ ಪ್ರಕಾಶ್ ದ್ವಿತೀಯ ನಾಯಕಿ ಆಗಿ ನಟಿಸಿದ್ದಾರೆ. ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ, ಮಾಳವಿಕಾ ಅವಿನಾಶ್​ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಪಿ.ಆರ್. ಮೀನಾಕ್ಷಿ ಸುಂದರಮ್ ,ಸುಂದರ ಕಾಮರಾಜ್ ನಿರ್ಮಾಣದ ಚಿತ್ರಕ್ಕೆ ಎಸ್. ನಾಗೇಂದ್ರ ಪ್ರಸಾದ್ ನಿರ್ದೇಶನ ಮಾಡಿದ್ದಾರೆ. ಜೀವ ಶಂಕರ್ ಅವರ ಛಾಯಾಗ್ರಹಣ, ವಿಜಯ್ ಮತ್ತು ವಿಕ್ಕಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಧನಂಜಯ ರಂಜನ್ ಹಾಡುಗಳನ್ನು ಬರೆದಿದ್ದಾರೆ. ಕಾರ್ತಿಕೇಯನ್ ಕ್ರಿಯೇಟಿವ್ ಪ್ರೊಡ್ಯೂಸರ್‌, ಬಾಲಾಜಿ ಸಂಕಲನ, ಅಶ್ವಥ್ ಮಾರಿಮುತ್ತು ಕಥೆ, ಮಂಜು ಮಾಂಡವ್ಯ, ಸಂಪತ್ ಸಿರಿಮನೆ ಹಾಗೂ ರಘುನಂದನ್ ಕಾನಡ್ಕಸಂಭಾಷಣೆ, ಶೃಂಗೇರಿ ಸುರೇಶ್ ಸಹ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರಕ್ಕೆ ಮೋಹನ್ ಬಿ. ಕೆ. ಅವರು ಕಲಾ ನಿರ್ದೇಶನ ಮಾಡಿದ್ದಾರೆ.
____

Be the first to comment

Leave a Reply

Your email address will not be published. Required fields are marked *

Translate »
error: Content is protected !!