ಲಕ್ಕಿ ಮ್ಯಾನ್ ಶೂಟಿಂಗ್ ಕಂಪ್ಲೀಟ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಲಕ್ಕಿ ಮ್ಯಾನ್ ಸಿನಿಮಾ ಶೂಟಿಂಗ್ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭ ಆಗಿವೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಲಕ್ಕಿ ಮ್ಯಾನ್ ಸಿನಿಮಾದಲ್ಲಿ ಪುನೀತ್ ಒಂದು ಡ್ಯಾನ್ಸ್ ಮತ್ತು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದಲ್ಲಿ ಪ್ರಭುದೇವ ಜೊತೆ ಪುನೀತ್ ಡಾನ್ಸ್ ಮಾಡಿದ್ದು, ಇದು ಸಾಕಷ್ಟು ಕುತೂಹಲ ಮೂಡಿಸಿದೆ.

ಸಿನಿಮಾದ ಕೊನೆಯ ದಿನದ ಶೂಟಿಂಗ್ ವೇಳೆ ಪುನೀತ್ ಕಟೌಟ್ ಗೆ ಪೂಜೆ ಮಾಡಿ ಗೌರವ ಸಲ್ಲಿಸಲಾಯಿತು. ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿ ಜನರೆದುರಿಗೆ ಬರಲು ಸಿದ್ಧತೆ ನಡೆಸಿದೆ.

ಕೆಲ ದಿನಗಳ ಹಿಂದೆ ಪುನೀತ್ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಲಕ್ಕಿ ಮ್ಯಾನ್ ‘ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಅಭಿಮಾನಿಗಳ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಪರ್ಸಾ ಪಿಕ್ಚರ್ಸ್ ಬ್ಯಾನರ್ ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದ ಡಬ್ಬಿಂಗ್ ಕೆಲಸ ಕಂಪ್ಲೀಟ್ ಆಗಿದೆ. ಈ ಚಿತ್ರ ಡಾರ್ಲಿಂಗ್ ಕೃಷ್ಣ ವೃತ್ತಿ ಬದುಕಿನ ಪ್ರಮುಖ ಚಿತ್ರವಾಗಿದ್ದು, ಚಿತ್ರದ ಕಥಾ ಹಂದರ ವಿಭಿನ್ನವಾಗಿದೆ. ಕೃಷ್ಣ ಈ ಬಾರಿ ತೆರೆಯ ಮೇಲೆ ಹೇಗೆ ಮೋಡಿ ಮಾಡಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ. ಶೀಘ್ರ ಚಿತ್ರದ ರಿಲೀಸ್ ಡೇಟ್ ಘೋಷಣೆಯಾಗುವ ನಿರೀಕ್ಷೆ ಹೊಂದಲಾಗಿದೆ.

‘ಲಕ್ಕಿ ಮ್ಯಾನ್’ ಚಿತ್ರವನ್ನು ಪ್ರಭುದೇವ ಸಹೋದರ ನಾಗೇಂದ್ರ ಪ್ರಸಾದ್ ಅವರು ನಿರ್ದೇಶನ ಮಾಡಿದ್ದಾರೆ. ಇದು ತಮಿಳಿನ ‘ಒ ಮೈ ಕಡವಳೆ’ ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ್ದ ಪಾತ್ರವನ್ನು ಕನ್ನಡದಲ್ಲಿ ಪುನೀತ್‌ ರಾಜ್‌ಕುಮಾರ್‌ ಮಾಡಿದ್ದಾರೆ. ಪುನೀತ್ ಅವರು ನಾಯಕ ನಟನಿಗೆ ದಾರಿ ತೋರಿಸುವ ‘ದೇವರ’ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್‌ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಪುನೀತ್ ರಾಜ್​ಕುಮಾರ್ ಹಾಗೂ ಬಹುಭಾಷಾ ನಟ ಪ್ರಭುದೇವ ಅವರು ಡಾ. ರಾಜ್​ಕುಮಾರ್ ಕುರಿತು ರಚಿಸಲಾದ ಹಾಡಿನಲ್ಲಿ ಡ್ಯಾನ್ಸ್​ ಮಾಡಿದ್ದಾರೆ ಎನ್ನುವುದು ವಿಶೇಷ ಆಗಿದೆ.

ಲಕ್ಕಿ ಮ್ಯಾನ್’ ಚಿತ್ರದಲ್ಲಿ ನಾಯಕಿಯಾಗಿ ಸಂಗೀತಾ ಶೃಂಗೇರಿ ಕಾಣಿಸಿಕೊಂಡಿದ್ದಾರೆ. ರೋಶಿನಿ ಪ್ರಕಾಶ್, ಆರ್ಯ, ರಂಗಾಯಣ ರಘು, ಸಾಧು ಕೋಕಿಲ, ನಾಗಭೂಷಣ್, ಸುಂದರ್ ರಾಜ್, ಸುಧಾ ಬೆಳವಾಡಿ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!