ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯನಟ ಎಂ.ಎಸ್.ಉಮೇಶ್ (80) ಅವರು ಭಾನುವಾರ ವಿಧಿವಶರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕಿದ್ವಾಯಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದಾಗಿ ಇತ್ತೀಚೆಗೆ ತಿಳಿದು ಬಂದಿತ್ತು. ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಉಮೇಶ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಗೌರವಪೂರ್ವಕವಾಗಿ ನೆರವೇರಿತು. ಸಹೋದರ ರಮೇಶ್ ಅವರು ಅಗ್ನಿ ಸ್ಪರ್ಶ ನೆರವೇರಿಸಿದರು.
ಎಂ. ಎಸ್. ಉಮೇಶ್ ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ 1948ರಿಂದ ಸಕ್ರಿಯರಾಗಿದ್ದರು. ಗುರು ಶಿಷ್ಯರು, ಭೂಮಿಗೆ ಬಂದ ಭಗವಂತ, ಕಿಲಾಡಿ ಜೋಡಿ, ಹಾಲು ಜೇನು, ಕಾಮನಬಿಲ್ಲು, ಮಕ್ಕಳ ರಾಜ್ಯ, ಭಾಗ್ಯವಂತರು, ಅಪೂರ್ವ ಸಂಗಮ, ಶೃತಿ ಸೇರಿದಾಗ, ಮೇಘ ಮಂದಾರ, ಆಕಸ್ಮಿಕ, ಸರ್ವರ್ ಸೋಮಣ್ಣ, ಮೇಘಮಾಲೆ, ನನ್ನಾಸೆಯ ಹೂವೆ, ಜಾಕಿ, ರ್ಯಾಂಬೊ, ಮುಸ್ಸಂಜೆ ಮಾತು, ಡೇರ್ ಡೆವಿಲ್ ಮುಸ್ತಫಾ, ಹಗಲುವೇಷ ಸೇರಿದಂತೆ 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದರು.
ಉಮೇಶ್ ಅವರ ಅಗಲಿಕೆಗೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
—-





Be the first to comment