ಒಟಿಟಿಗೆ ‘ಮಾ ಇಂಟಿ ಬಂಗಾರಂ’

ಸಮಂತಾ ರುತ್ ಪ್ರಭು ನಟನೆಯ ಆ್ಯಕ್ಷನ್ ಡ್ರಾಮಾ ‘ಮಾ ಇಂಟಿ ಬಂಗಾರಂ’ ಚಿತ್ರ  ಜುಲೈ 17 ರಂದು ಜಿಯೋ ಹಾಟ್‌ಸ್ಟಾರ್‌ನಲ್ಲಿ ಬಿಡುಗಡೆಯಾಗಲಿದೆ.

ಬಿವಿ ನಂದಿನಿ ರೆಡ್ಡಿ ನಿರ್ದೇಶನದ ‘ಮಾ ಇಂಟಿ ಬಂಗಾರಂ’ ಚಿತ್ರ  ಜೂನ್ 19 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿತು. ತಮಿಳಿನಲ್ಲಿ ‘ಎಂಗಲ್ ತಂಗಂ’ ಎಂಬ ಹೆಸರಿನಲ್ಲಿ ಬಿಡುಗಡೆಯಾಯಿತು. ಈ ಚಿತ್ರ ಇಲ್ಲಿಯವರೆಗೆ ಅತಿ ಹೆಚ್ಚು ಗಳಿಕೆ ಮಾಡಿದ ಮಹಿಳಾ ಪ್ರಧಾನ ತೆಲುಗು ಚಿತ್ರವಾಗಿ ಹೊರಹೊಮ್ಮಿದೆ.  ಚಿತ್ರ ಒಟಿಟಿಯಲ್ಲಿ ತನ್ನ  ಓಟವನ್ನು ಮುಂದುವರಿಸುವ ನಿರೀಕ್ಷೆಯಿದೆ.

‘ಮಾ ಇಂಟಿ ಬಂಗಾರಂ’ ಚಿತ್ರ ಬಿಡುಗಡೆಯಾದ 22 ದಿನಗಳಲ್ಲಿ ವಿಶ್ವದಾದ್ಯಂತ ₹100 ಕೋಟಿಗಳಿಗೂ ಹೆಚ್ಚು ಗಳಿಸಿದೆ. ಬಿಡುಗಡೆಯಾದ ಮೊದಲ ದಿನ ಚಿತ್ರ  ಸುಮಾರು 13 ಕೋಟಿ ₹ ಗಳಿಕೆ ಕಂಡಿದೆ.

‘ಮಾ ಇಂಟಿ ಬಂಗಾರಂ’ ಚಿತ್ರದಲ್ಲಿ ಗೌತಮಿ, ಮಂಜುಷಾ ಮತ್ತು ದಿಗಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆಯನ್ನು ರಾಜ್ ನಿಡಿಮೋರು ಬರೆದಿದ್ದರೆ, ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ ಸಮಂತಾ ತಮ್ಮ ನಿರ್ಮಾಣ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಿಸಿದ್ದಾರೆ. ಮಯೋಸಿಟಿಸ್ ರೋಗದಿಂದಾಗಿ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದ ಸಮಂತಾ ಅವರು ‘ಮಾ ಇಂಟಿ ಬಂಗಾರಂ’ ಚಿತ್ರದ ಮೂಲಕ ಬೆಳ್ಳಿಪರದೆಯಲ್ಲಿ ಕಾಣಿಸಿಕೊಂಡರು.

‘ಮಾ ಇಂಟಿ ಬಂಗಾರಂ’  ಚಿತ್ರದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಮಂತಾ ಅವರ ನಟನೆಯನ್ನು ಪ್ರೇಕ್ಷಕರು ಮೆಚ್ಚಿಕೊಂಡರು.

—–

 

 

Be the first to comment

Leave a Reply

Your email address will not be published. Required fields are marked *

Translate »
error: Content is protected !!