‘ಮಾದೇವ’ ಜೂನ್‍ 6ರಂದು ಬಿಡುಗಡೆ

‘ಮರಿ ಟೈಗರ್‌’ ವಿನೋದ್‍ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರ ಜೂನ್‍ 6ರಂದು ಬಿಡುಗಡೆ ಆಗಲಿದೆ.

ಮಾದೇವ’ ಚಿತ್ರವು ಮೇ 30 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದು ಹೇಳಲಾಗಿತ್ತು. ಈಗ ಚಿತ್ರವು ಒಂದು ವಾರ ಮುಂದಕ್ಕೆ ಹೋಗಿದೆ.

ಚಿತ್ರದಲ್ಲಿ ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿನೋದ್‌ ಈ ಚಿತ್ರದಲ್ಲಿ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.  ಶ್ರೀನಗರ ಕಿಟ್ಟಿ, ಮಾಲಾಶ್ರೀ, ಶ್ರುತಿ, ಅಚ್ಯುತ್‍ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ, ಮುನಿರಾಜು, ಚೈತ್ರಾ ಮುಂತಾದ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ.

‘ಖಾಕಿ’ ಚಿತ್ರದ ನಂತರ ನವೀನ್ ರೆಡ್ಡಿ ಈ ಚಿತ್ರ ನಿರ್ದೇಶಿಸಿದ್ದು, ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದ್ಯೋತನ್ ಸಂಗೀತ ನಿರ್ದೇಶನ, ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ, ಗುಣ ಕಲಾ ನಿರ್ದೇಶನ,  ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಚಿತ್ರವನ್ನು ರಾಧಾಕೃಷ್ಣ ಪ್ರೊಡಕ್ಷನ್ಸ್ ಲಾಂಛನದಡಿ ಆರ್. ಕೇಶವ ನಿರ್ಮಿಸಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!