ಮದಗಜ ಚಿತ್ರದ ಅಂತಿಮ ಶೂಟಿಂಗ್ ಪ್ರಗತಿಯಲ್ಲಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತಗೊಳಿಸಿದ್ದ ಮದಗಜ’ ಚಿತ್ರತಂಡ ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದೆ.

“ಲಾಕ್‌ಡೌನ್ ತೆರವು ಆದ ಬಳಿಕ ಜುಲೈ 22ರಿಂದ ‘ಮದಗಜ’ ಚಿತ್ರೀಕರಣ ಆರಂಭವಾಗಿದೆ” ಎಂದು ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದ್ದಾರೆ.
‘ರಾಬರ್ಟ್’ ಖ್ಯಾತಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಹೀರೋ ಶ್ರೀಮುರಳಿಗೆ ಆಶಿಕಾ ರಂಗನಾಥ್ ಜೋಡಿಯಾಗಿ ಕಾಣಿಸಿದ್ದಾರೆ. ತೆಲುಗು ನಟ ಜಗಪತಿ ಬಾಬು ಖಳನಾಯಕನ ಪಾತ್ರ ನಿರ್ವಹಿಸುತ್ತಿದ್ದು ಸಾಕಷ್ಟು ನಿರೀಕ್ಷೆ ಮೂಡಿಸಿದ್ದಾರೆ.

2 ದಶಕದ ನಂತರ ದಕ್ಷಿಣ ಭಾರತದ ಖ್ಯಾತ ನಟಿ ದೇವಯಾನಿ ಕನ್ನಡ ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಮರಳಿದ್ದಾರೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಚಿತ್ರ ಕನ್ನಡ, ತೆಲುಗು ಹಾಗೂ ತಮಿಳಿನಲ್ಲಿ ರಿಲೀಸ್ ಆಗುತ್ತಿದೆ. ಈ ಮೂರು ಭಾಷೆಯಲ್ಲಿ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 

Be the first to comment

Leave a Reply

Your email address will not be published. Required fields are marked *

Translate »
error: Content is protected !!