ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರದ ಆರೋಪ

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್ ಅವರು ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 4.50 ಕೋಟಿ ರೂಪಾಯಿ ಭ್ರಷ್ಟಾಚಾರ ಎಸಗಿದ್ದಾರೆ ಎಂದು ನಟ ಮದನ್ ಪಟೇಲ್ ಆರೋಪ ಮಾಡಿದ್ದಾರೆ.

2018-19ರ ಸಾಲಿನಲ್ಲಿ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ 4 ಕೋಟಿ ರೂ.ನ್ನು ಆಗಿನ ಅಕಾಡೆಮಿ ಅಧ್ಯಕ್ಷರು ಖರ್ಚು ಮಾಡಿದ್ದರು. ಅದೇ 2019-20ನೇ ಸಾಲಿನ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವಕ್ಕೆ 8 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ದುಪ್ಪಟ್ಟು ಹಣ ಖರ್ಚು ಮಾಡಿ ಸರ್ಕಾರದ ಬೊಕ್ಕಸಕ್ಕೆ 4 ಕೋಟಿ ರೂಪಾಯಿ ನಷ್ಟ ಮಾಡಿದ್ದಾರೆ” ಎಂದು ಮದನ್ ಪಟೇಲ್ ಅವರು ಎಸಿಬಿಗೆ ದೂರು ನೀಡಿದ್ದಾರೆ.

” ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ. ನನಗೂ ಸುನಿಲ್ ಪುರಾಣಿಕ್‌ಗೂ ವೈಯಕ್ತಿಕ ದ್ವೇಷವಿಲ್ಲ. ಸರ್ಕಾರದ ಹಣ ಪೋಲಾಗಬಾರದು ಎನ್ನುವ ಕಾರಣಕ್ಕೆ ಈ ಬಗ್ಗೆ ದೂರು ನೀಡಿದ್ದೇನೆ” ಎಂದು ಮದನ್ ಪಟೇಲ್ ಹೇಳಿದ್ದಾರೆ.

ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುನಿಲ್ ಪುರಾಣಿಕ್, ”ನಾನು ಅಧ್ಯಕ್ಷನಾಗುವ ಮುನ್ನವೇ ಕಾರ್ಯ ಯೋಜನೆ ಅನುಮೋದನೆ ಆಗಿತ್ತು. ನಾನು ಅಧ್ಯಕ್ಷನಾದ ಬಳಿಕ ಅದಕ್ಕೆ ಅನುಮೋದನೆ ನೀಡಿದ್ದೇನೆ. ಈ ಬಗ್ಗೆ ಜಗದೀಶ್ ಶೆಟ್ಟರ್ ಅವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಎಂಟು ತಿಂಗಳ ಹಿಂದೆ ಮುಗಿದುಹೋದ ವಿಚಾರಕ್ಕೆ ಮದನ್ ಪಟೇಲ್ ಅವರು ದೂರು ಕೊಟ್ಟಿದ್ದಾರೆ. ಅವರ ಪ್ರಶ್ನೆಗಳಿಗೆ ನಾನು ಎಲ್ಲಿ, ಯಾವ ವೇದಿಕೆಯಲ್ಲಿ ಉತ್ತರ ನೀಡಬೇಕೊ ಅಲ್ಲಿಯೇ ಉತ್ತರ ನೀಡುತ್ತೇನೆ” ಎಂದು ಹೇಳಿದ್ದಾರೆ.
____________

Be the first to comment

Leave a Reply

Your email address will not be published. Required fields are marked *

Translate »
error: Content is protected !!