ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಕನ್ನಡ ಚಿತ್ರರಂಗ ವಿಧಿಸಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ.
ಸ್ನೇಹಿತ ಮೇಲೆ ಅತ್ಯಾಚಾರ ಆಗಿದ್ದ ಆರೋಪ ಎದುರಿಸುತ್ತಿರುವ ಮಡೆನೂರು ಮನು ವಿರುದ್ಧ ಹಿರಿಯ ನಟರಾದ ಶಿವರಾಜಕುಮಾರ್, ಧ್ರುವ ಸರ್ಜಾ ಮತ್ತು ದರ್ಶನ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆಡಿಯೋ ವೈರಲ್ ಆದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮನು ಅವರು ಶಿವರಾಜ್ ಕುಮಾರ್, ಧ್ರುವ ಸರ್ಜಾ ಹಾಗೂ ದರ್ಶನ್ ಅವರಿಗೆ ಕ್ಷಮೆಯಾಚಿಸಿ ಪತ್ರ ಬರೆದಿದ್ದರು. ಪತ್ರವನ್ನು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರಿಗೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಫಿಲಂ ಚೇಂಬರ್ ನಿಷೇಧ ತೆರವು ಮಾಡಿದೆ.
‘ಮನು ಅವರು ನಟರ ಬಳಿ ಕ್ಷಮೆ ಕೇಳಿದ್ದಾರೆ. ಅವರಿಗೆ ನಾವು ಅವಕಾಶ ಕೊಡುತ್ತೇವೆ. ಮುಂದಿನ ದಿನಗಳಲ್ಲಿ ಅವರು ಉತ್ತಮ ನಟನಾಗಿ ಕನ್ನಡ ಚಿತ್ರರಂಗದ ಹೆಸರು ಕಾಪಾಡಲಿ’ ಎಂದು ಉಮೇಶ್ ಬಣಕಾರ್ ಹೇಳಿದ್ದಾರೆ.
ಶಿವಣ್ಣ ಅವರ ಮನೆಗೆ ಇತ್ತೀಚೆಗೆ ಮನು ಅವರು ಭೇಟಿ ನೀಡಿದ್ದರು. ಆದರೆ ಶಿವಣ್ಣ ಭೇಟಿ ಆಗಲು ಸಾಧ್ಯವಾಗಿರಲಿಲ್ಲ. ಆ ಬಳಿಕ ಮನು ಅವರು ನಟರಿಗೆ ಕ್ಷಮೆ ಕೋರಿ ಪತ್ರ ಬರೆದಿದ್ದರು.





Be the first to comment