ಒಟಿಟಿಯಲ್ಲಿ ‘ಮಾದೇವ’

ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂತೆರೋ ನಟಿಸಿರುವ ಆ್ಯಕ್ಷನ್-ಡ್ರಾಮಾ ‘ಮಾದೇವ’  ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ವಿಭಿನ್ನ ಪಾತ್ರದಲ್ಲಿ ನಟಿಸಿದ್ದ ವಿನೋದ್ ಪ್ರಭಾಕರ್ ಅವರಿಗೆ ಈ ಚಿತ್ರ ಯಶಸ್ಸು ತಂದುಕೊಟ್ಟಿತು. ರಾಧಾಕೃಷ್ಣ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಆರ್ ಕೇಶವ (ದೇವಸಂದ್ರ) ನಿರ್ಮಿಸಿರುವ ಈ ಚಿತ್ರಕ್ಕೆ ಖಾಕಿ ಚಿತ್ರದ ನಂತರ ನವೀನ್ ರೆಡ್ಡಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ನವೀನ್ ರೆಡ್ಡಿ ಅವರು ಕಥೆ ಮತ್ತು ಚಿತ್ರಕಥೆಯನ್ನೂ ಬರೆದಿದ್ದಾರೆ.

ಚಿತ್ರಕ್ಕೆ ಪ್ರದ್ಯೋತನ್ ಅವರ ಸಂಗೀತ ಸಂಯೋಜನೆ, ಬಾಲಕೃಷ್ಣ ತೋಟ  ಛಾಯಾಗ್ರಹಣ, ವಿಜಯ್ ಎಂ ಕುಮಾರ್   ಸಂಕಲನ, ಗುಣ  ಕಲಾ ನಿರ್ದೇಶನ,   ಥ್ರಿಲ್ಲರ್ ಮಂಜು, ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್ ಮತ್ತು ವಿಕ್ರಮ್ ಮೋರ್ ಅವರ ಸಾಹಸ ಸಂಯೋಜನೆ ಇದೆ.

ಚಿತ್ರದಲ್ಲಿ ವಿನೋದ್ ಪ್ರಭಾಕರ್, ಸೋನಲ್ ಮೊಂತೆರೋ ಜೊತೆಗೆ ಶ್ರೀನಗರ ಕಿಟ್ಟಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದರೊಂದಿಗೆ ಹಿರಿಯ ನಟರಾದ ಮಾಲಾಶ್ರೀ, ಶ್ರುತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ, ಮೈಕೋ ನಾಗರಾಜ್, ಬಾಲ ರಾಜವಾಡಿ, ಮುನಿರಾಜು ಮತ್ತು ಚೈತ್ರ  ತಾರಾಗಣದಲ್ಲಿದ್ದಾರೆ.

—-

Be the first to comment

Leave a Reply

Your email address will not be published. Required fields are marked *

Translate »
error: Content is protected !!