ಮದ್ಯಪಾನ, ಮಾಂಸಹಾರ ಸೇವಿಸಿ ಕಾಂತಾರ ಚಾಪ್ಟರ್ 1 ಸಿನಿಮಾ ನೋಡಬಾರದು ಎನ್ನುವ ವದಂತಿ ಬಗ್ಗೆ ಚಿತ್ರದ ನಾಯಕ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಸ್ಪಷ್ಟೀಕರಣ ನೀಡಿದ್ದಾರೆ.
ಕಾಂತಾರ ಚಾಪ್ಟರ್ 1 ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಕೇಳಿದ ಪ್ರಶ್ನೆಗೆ ಮಾತನಾಡಿದ ಅವರು, ಆಹಾರ ಪದ್ಧತಿ ಅವರವರ ಅಭ್ಯಾಸಗಳು. ಅದನ್ನು ಯಾರು ಪ್ರಶ್ನೆ ಮಾಡಲು ಆಗುವುದಿಲ್ಲ. ಅದು ಅವರ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಯಾರೋ ಈ ಬಗ್ಗೆ ಫೇಕ್ ಪೋಸ್ಟ್ ಮಾಡಿದ್ದಾರೆ. ಈ ಬಗ್ಗೆ ನಮ್ಮ ಗಮನಕ್ಕೂ ಬಂದಿದೆ. ಆದರೆ ನಾವು ಈ ಸಂಬಂಧ ಅವರ ಬಳಿ ಹೋಗಿ ಮಾತನಾಡುವುದು ಕಷ್ಟ. ಅವರೇ ಆನಂತರ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದಾರೆ ಎಂದು ಅವರು ಹೇಳಿದರು.

ಈ ಪೋಸ್ಟ್ ಗೂ ನಮ್ಮ ಪ್ರೊಡಕ್ಷನ್ ಹೌಸಿಗೆ ಯಾವುದೇ ಸಂಬಂಧ ಇಲ್ಲ. ನನಗೆ ಯಾರೋ ಪೋಸ್ಟ್ ಕಳುಹಿಸಿದಾಗ ಶಾಕ್ ಆಯ್ತು. ಯಾಕೆ ಹೀಗೆ ಮಾಡುತ್ತಿದ್ದಾರೆ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಬದುಕುವ ಶೈಲಿ ಅವರವರ ವಿವೇಚನೆಗೆ ಬಿಟ್ಟದ್ದು. ಇದನ್ನು ಪ್ರಶ್ನೆ ಮಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಅವರು ಹೇಳಿದರು.
ಕಾಂತಾರ ಚಾಪ್ಟರ್ 1 ಸಿನಿಮಾದ ಟ್ರೈಲರ್ ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಟ್ರೈಲರ್ ನಲ್ಲಿ ರಿಷಬ್ ಜೊತೆಗೆ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.






Be the first to comment