Maggi pustaka: ‘ಮಗ್ಗಿ ಪುಸ್ತಕ’ ದ ಫಸ್ಟ್ ಲುಕ್ ಲಾಂಚ್

ಕಾದಂಬರಿ ಆಧಾರಿತ ಸಿನಿಮಾ ‘ಮಗ್ಗಿ ಪುಸ್ತಕ’ ದ ಫಸ್ಟ್ ಲುಕ್ ನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣ ಮಾಡಿದರು.

 ದಸರಾ‌ ಮಹೋತ್ಸವದ ಅಂಗವಾಗಿ ಚಿತ್ರದ ಫಸ್ಟ್ ಲುಕ್ ನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಲಾಂಚ್  ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು. ಎಚ್.ಸಿ.ಹರೀಶ್ ಅವರ ಅವನಿ ಕಾದಂಬರಿ ಆಧರಿಸಿ ಮಗ್ಗಿ ಪುಸ್ತಕ  ಸಿನಿಮಾವನ್ನು ದೃಶ್ಯ ರೂಪಕ್ಕಿಳಿಸಲಾಗಿದೆ.

ಚಿನ್ನಾಸ್ವಾಮಿ ಫಿಲ್ಮಂ ಸಂಸ್ಥೆಯಡಿ ಚಿನ್ನಾಸ್ವಾಮಿ ಯತಿರಾಜ್ ತಮ್ಮ ಸ್ನೇಹಿತರ ಜೊತೆಗೂಡಿ ಚಿತ್ರ ನಿರ್ಮಿಸುತ್ತಿದ್ದಾರೆ. ಅವನಿ ಕಾದಂಬರಿಕಾರ ಎಚ್ ಸಿ ಹರೀಶ್,  ಮಗ್ಗಿ ಪುಸ್ತಕ ಸಿನಿಮಾಗೆ ಚಿತ್ರಕಥೆ ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.

ಮಗ್ಗಿ ಪುಸ್ತಕ ಸಿನಿಮಾದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ದಡ್ಡ ಪ್ರವೀಣ ಖ್ಯಾತಿಯ ರಂಜನ್ ಸಜ್ಜು, ಶ್ರೀರಕ್ಷಾ,  ಮೈಸೂರು ರಮಾನಂದ, ರಂಗಾಯಣ ರಘು, ಗಿರಿಜಾ ಲೋಕೇಶ್, ಪ್ರಮೋದ್ ಶೆಟ್ಟಿ, ಬಿರಾದಾರ, ಮಿಮಿಕ್ರಿ ಗೋಪಿ, ಚಂದ್ರಪ್ರಭಾ, ವಾಣಿ, ರಾನ್ವಿ ಶೇಖರ್, ಕೃಷ್ಣ ಮಹೇಶ್, ವರದ, ಶ್ರೀನಿವಾಸ್ ಗೌಡ, ಮೂಗು ಸುರೇಶ್ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ಮೈಸೂರು, ಮಂಗಳೂರು, ಎಚ್ ಡಿ ಕೋಟೆ, ನಂಜನಗೂಡು, ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮುಂದಿನ ವರ್ಷಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ನಂದಕುಮಾರ್ ಛಾಯಾಗ್ರಹಣ, ಯಶಸ್ ನಾಚಪ್ಪ ಸಂಗೀತ, ಶರಣ್ ಕುಮಾರ್ ಗಜೇಂದ್ರಗಡ, ಗುರುನಾಥ ಬೋರಗಿ ಸಾಹಿತ್ಯ, ಶಿವಕುಮಾರ್ ಎಂ.ಸಂಕಲನ, ರಸೂಲ್ ನದಾಫ್ ಕಲಾ ನಿರ್ದೇಶನ  ಸಿನಿಮಾಕ್ಕಿದೆ.

 

 

 

—–

Be the first to comment

Leave a Reply

Your email address will not be published. Required fields are marked *

Translate »
error: Content is protected !!