‘ಮಹಾಕವಿ’ ಶೂಟಿಂಗ್‌ ಮುಕ್ತಾಯ

ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಮಹಾಕವಿ’ ಕನ್ನಡ ಸಿನಿಮಾದ ಚಿತ್ರೀಕರಣ  ಮುಕ್ತಾಯಗೊಂಡಿದೆ.

‘ಮಹಾಕವಿ’ ಬರಗೂರರ ನಿರ್ದೇಶನದ ಇಪ್ಪತ್ತೈದನೇ ಚಿತ್ರ. ಚಿತ್ರ ಕನ್ನಡದ ಆದಿಕವಿಯೆಂದೇ ಪ್ರಸಿದ್ಧನಾದ ಪಂಪನ ಕಾವ್ಯಗಳನ್ನು ಆಧರಿಸಿದೆ.ಚಿತ್ರ ಪಂಪ ಮಹಾಕವಿಯು ತನ್ನ ಕಾವ್ಯಗಳಲ್ಲಿ ಪ್ರತಿಪಾದಿಸಿದ ಪರಿಕಲ್ಪನೆಗಳಿಗೆ ಕಥನ ರೂಪ ಕೊಡಲಾಗಿದೆ.

ಪಂಪ   ರಾಜನ ಆಸ್ಥಾನದಲ್ಲಿದ್ದೂ ಸೃಜನಶೀಲ ಸ್ವಾತಂತ್ರ್ಯವನ್ನ ಸಮರ್ಥಿಸಿಕೊಂಡು ಬರೆದ ಕವಿ. ಪ್ರಭುತ್ವ ಮತ್ತು ಸೃಜನಶೀಲ ಸ್ವಾತಂತ್ರ್ಯವನ್ನ ಕುರಿತ ಪಂಪನ ಪರಿಕಲ್ಪನೆ ಇಂದಿಗೂ ಪ್ರಸ್ತುತವಾಗಿದೆ.  ಕನ್ನಡ ಸಾಹಿತ್ಯದಲ್ಲಿ ಜಾತಿ ವ್ಯವಸ್ಥೆಯನ್ನ ವಿರೋಧಿಸಿದ ಮೊಟ್ಟಮೊದಲ ಕವಿ ಪಂಪ.  ಈ ಎಲ್ಲಾ ಪರಿಕಲ್ಪನೆಗಳಿಗೆ ಪ್ರತೀಕವಾಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆ.

ಪಂಪನ ಪಾತ್ರದಲ್ಲಿ  ಕಿಶೋರ್ ಅಭಿನಯಿಸಿದ್ದಾರೆ. ‘ಬಿಗ್ಬಾಸ್’ ಖ್ಯಾತಿಯ ಅನುಷಾ ರೈ ನಾಯಕಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಆಕಾಂಕ್ಷ್ ಬರಗೂರು ಬಾಲಕ ಪಂಪನ ಪಾತ್ರವನ್ನು  ವಹಿಸಿದ್ದಾರೆ. ಸುಂದರರಾಜ್, ಪ್ರಮೀಳಾ ಜೋಷಾಯ್, ಕುಮಾರ್ ಗೋವಿಂದ್, ಸುಂದರರಾಜ ಅರಸು, ವತ್ಸಲಾ ಮೋಹನ್, ರಾಘವ್, ಹನುಮಂತೇಗೌಡ, ಶಾಂತರಾಜು, ಚಲಪತಿ ಸಿರಾ, ಬಾಲಕೃಷ್ಣ ಬರಗೂರು, ನಟರಾಜ್, ಪ್ರವೀಣ್, ಮುಂತಾದವರ ತಾರಾಗಣವಿದೆ.

ಬರಗೂರು ರಾಮಚಂದ್ರಪ್ಪ  ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ, ನಟ್ರಾಜ್ ಶಿವು ಮತ್ತು ಪ್ರವೀಣ್  ಸಹನಿರ್ದೇಶನ, ತ್ರಿಭುವನ್ ನೃತ್ಯ ನಿರ್ದೇಶನ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ  ಚಿತ್ರಕ್ಕಿದೆ.

—-

 

Be the first to comment

Leave a Reply

Your email address will not be published. Required fields are marked *

Translate »
error: Content is protected !!