ರಾಕಿಂಗ್ ಸ್ಟಾರ್ ಯಶ್ ನಾಯಕನಟರಾಗಿ ಅಭಿನಯಿಸುತ್ತಿರುವ `ಮೈ ನೇಮ್ ಈಸ್ ಕಿರಾತಕ` ಚಿತ್ರದ ಮುಹೂರ್ತ ಸಮಾರಂಭ ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು ಬೆಳಗ್ಗಿನ ಬ್ರಾಹ್ಮಿ ಮುಹೂರ್ತದಲ್ಲಿ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಚಿತ್ರಿಸಲಾದ ಮೊದಲ ಸನ್ನಿವೇಶಕ್ಕೆ ನಟ ಯಶ್ ಕ್ಯಾಮೆರಾ ಚಾಲನೆ ಮಾಡಿದರು.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಠು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು `ದಿಲ್ವಾಲ` ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಸೆಪ್ಟಂಬರ್ 3ರಿಂದ ಚಿತ್ರಕ್ಕೆ ಮಂಡ್ಯ ಸುತ್ತಮುತ್ತ ಮೊದಲ ಹಂತದ ಚಿತ್ರೀಕರಣ ಆರಂಭವಾಗಲಿದೆ. ದ್ವಿತೀಯ ಹಂತದ ಚಿತ್ರೀಕರಣ ದುಬೈನಲ್ಲಿ ನಡೆಯಲಿದೆ. ಚಿತ್ರದ ನಾಯಕಿಯ ಆಯ್ಕೆ ಪ್ರಗತಿಯಲ್ಲಿದೆ.
ಕೆ.ಜಿ.ಎ¥sóï ಚಿತ್ರದ ಪಾತ್ರಕ್ಕಾಗಿ ಕಳೆದ ಎರಡು ವರ್ಷಗಳಿಂದ ಗಡ್ಡ ಹಾಗೂ ಉದ್ದನೆ ಕೂದಲು ಬಿಟ್ಟಿದ್ದ ಯಶ್ ಅವರು `ಮೈ ನೇಮ್ ಈಸ್ ಕಿರಾತಕ` ಚಿತ್ರಕ್ಕಾಗಿ ದಪ್ಪನೆ ಗಡ್ದ ತೆಗೆದು ಹೊಸ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Be the first to comment