ಮಲೈಕಾ ವಸುಪಾಲ್

‘ಕಲ್ಟ್’ ಸಿನಿಮಾದಲ್ಲಿ ಮಲೈಕಾ ವಸುಪಾಲ್

‘ಉಪಾಧ್ಯಕ್ಷ’ ಬಳಿಕ ಮಲೈಕಾ ವಸುಪಾಲ್, ಝೈದ್ ಖಾನ್ ನಟಿಸುತ್ತಿರುವ ‌’ಕಲ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಸಿನಿಮಾದ ಪೋಸ್ಟರ್ ನ್ನು ಮಲೈಕಾ ವಸುಪಾಲ್ ಹಂಚಿಕೊಂಡಿದ್ದು “ಎಲ್ಲರಿಗೂ ನಮಸ್ಕಾರ. ನನ್ನ ಮುಂದಿನ ಪ್ರಾಜೆಕ್ಟ್ ಯಾವಾಗ ನಾನು ಈ ಪಾತ್ರದಲ್ಲಿ ನಟಿಸುತ್ತಿದ್ದೇನೆ ಎಂದನಿಸುತ್ತಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ ನನ್ನ ಮೇಲಿರಲಿ” ಎಂದು ಬರೆದುಕೊಂಡಿದ್ದಾರೆ.

‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅಭಿನಯಿಸುತ್ತಿರುವಾಗಲೇ ಸ್ಯಾಂಡಲ್ ವುಡ್ ನಲ್ಲಿ ನಟಿಸುವ ಅವಕಾಶವನ್ನು ಮಲೈಕಾ ಪಡೆದುಕೊಂಡಿದ್ದರು.  ಹಾಸ್ಯನಟ ಚಿಕ್ಕಣ್ಣ ನಾಯಕ ನಟನಾಗಿ ಅಭಿನಯಿಸಿರುವ ‘ಉಪಾಧ್ಯಕ್ಷ’ ಸಿನಿಮಾದಲ್ಲಿ ಮಲೈಕಾ ನಾಯಕಿಯಾಗಿ ಬಣ್ಣ ಹಚ್ಚಿದರು. ಮೊದಲ ಧಾರಾವಾಹಿಯಂತೆ ಮೊದಲ ಸಿನಿಮಾದಲ್ಲಿಯೂ ಮಲೈಕಾ ಅದ್ಭುತವಾಗಿ ನಟಿಸಿ ಸಿನಿ ಪ್ರಿಯರನ್ನು ರಂಜಿಸಿದ್ದರು.

ಡಾಲಿ ಧನಂಜಯ್ ನಿರ್ಮಾಣದ ನಾಗಭೂಷಣ್ ನಾಯಕ ನಟನಾಗಿ ಬಣ್ಣ ಹಚ್ಚಿದ ‘ವಿದ್ಯಾಪತಿ’ ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿರುವ ಮಲೈಕಾ, ‌’ಕಲ್ಟ್’  ಸಿನಿಮಾದಲ್ಲಿ ನಟಿಸುವ ಅವಕಾಶವನ್ನು ಪಡೆದುಕೊಂಡಿದ್ದಾರೆ.

ಇಂಜಿನಿಯರಿಂಗ್ ಪದವೀಧರೆಯಾಗಿರುವ ಮಲೈಕಾ ಅವರಿಗೆ ಬಣ್ಣದ ಲೋಕದಲ್ಲಿ ಗುರುತಿಸಿಕೊಳ್ಳಬೇಕು ಎಂಬ ಕನಸಿತ್ತು.‌  ತನ್ನ ಕನಸನ್ನು ನನಸು ಮಾಡಿಕೊಂಡಿರುವ ಮಲೈಕಾ, ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲಿಯೂ ಸಿನಿ ಪ್ರಿಯರನ್ನು ರಂಜಿಸುತ್ತಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!