Mallika Singh: ಕನ್ನಡಕ್ಕೆ ಬರುತ್ತಿದ್ದಾರೆ ‘ರಾಧಾ ಕೃಷ್ಣ’ದ ರಾಧೆ

‘ರಾಧಾ ಕೃಷ್ಣ’ ಧಾರಾವಾಹಿಯಲ್ಲಿ ರಾಧೆ ಪಾತ್ರ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದ ಮಲ್ಲಿಕಾ ಸಿಂಗ್ ವಿನಯ್ ರಾಜ್ ಕುಮಾರ್ ಗೆ ಜೋಡಿಯಾಗುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ.

ಮಲ್ಲಿಕಾ ಸಿಂಗ್ ತಮ್ಮ ಚೊಚ್ಚಲ ಕನ್ನಡ ಸಿನಿಮಾದಲ್ಲಿ ಅವರು ವಿನಯ್​ ರಾಜ್​ಕುಮಾರ್​ ಜೊತೆ ತೆರೆ ಹಂಚಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಸಿಂಪಲ್ ಸುನಿ ನಿರ್ದೇಶನ ಮಾಡುತ್ತಿದ್ದಾರೆ.

ಮಲ್ಲಿಕಾ ಸಿಂಗ್​ ಅವರು ಈ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು, ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.

ನಿರ್ದೇಶಕ ಸಿಂಪಲ್​ ಸುನಿ ಮತ್ತು ನಟ ವಿನಯ್​ ರಾಜ್​ಕುಮಾರ್​ ಅವರ ಕಾಂಬಿನೇಷನ್​ನಲ್ಲಿ ಮೂಡಿಬರುತ್ತಿರುವ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಅಂತಿಮವಾಗಿಲ್ಲ. ಈಗಾಗಲೇ ಮೊದಲ ಹಂತದ ಶೂಟಿಂಗ್​ ಮುಗಿದಿದೆ. ಪಾತ್ರವರ್ಗದ ಬಗ್ಗೆ ಈಗ ಅಪ್​ಡೇಟ್​ ಸಿಗಲು ಶುರುವಾಗಿದೆ.
__

Be the first to comment

Leave a Reply

Your email address will not be published. Required fields are marked *

Translate »
error: Content is protected !!