ನಟಿ ಜೊತೆ ಉದ್ಯಮಿ ಡೇಟಿಂಗ್

ಉದ್ಯಮಿ, Zerodha ಕಂಪನಿಯ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ನಟಿ ಮಾನುಷಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಮಾನುಷಿ ಬೆಂಗಳೂರಿನ ಉದ್ಯಮಿ ನಿಖಿಲ್ ಕಾಮತ್ ಜೊತೆ ಡೇಟಿಂಗ್ ಮಾಡುತ್ತಿದ್ದು, ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇತ್ತೀಚೆಗಷ್ಟೇ ಈ ಜೋಡಿ, ರಿಷಿಕೇಶಕ್ಕೆ ಒಟ್ಟಿಗೆ ಹೋಗಿದ್ದರು. ಇಬ್ಬರೂ ಒಟ್ಟಿಗೆ ನೆಲೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಎಂಗೇಜ್ ಆಗಿರುವ ಬಗ್ಗೆ ಇಬ್ಬರೂ ಎಲ್ಲೂ ಅಧಿಕೃತವಾಗಿ ಹೇಳಿಕೊಂಡಿಲ್ಲ. ಮೂಲಗಳ ಪ್ರಕಾರ ಸದ್ಯದಲ್ಲೇ ಈ ಜೋಡಿ ಹಸೆಮಣೆ ಏರಲಿದ್ದಾರೆ ಎನ್ನಲಾಗುತ್ತಿದೆ.

ಅಕ್ಷಯ್ ಕುಮಾರ್ ನಟನೆಯ `ಸಾಮ್ರಾಟ್ ಪೃಥ್ವಿರಾಜ್’ ಚಿತ್ರದಲ್ಲಿ ಮಾನುಷಿ ನಾಯಕಿಯಾಗಿ ನಟಿಸಿದ್ದರು. ಬಳಿಕ ಅವರಿಗೆ ಸಾಕಷ್ಟು ಸಿನಿಮಾಗಳ ಆಫರ್ ಬರುತ್ತಿದೆ.

ಬೆಂಗಳೂರು ಮೂಲದ ಬ್ಯುಸಿನೆಸ್ ಮ್ಯಾನ್ ಆಗಿರುವ ನಿಖಿಲ್ ಕಾಮತ್‌ಗೆ ಈ ಹಿಂದೆಯೇ ಒಂದು ಮದುವೆ ಆಗಿತ್ತು. 2019ರ ವೇಳೆ ಇಟಲಿಯಲ್ಲಿ ಅಮಂಡಾ ಪುರವಂಕರ ಜೊತೆ ವಿವಾಹವಾಗಿದ್ದ ನಿಖಿಲ್ ವೈಯಕ್ತಿಕ ಕಾರಣದಿಂದ 2021ರಲ್ಲಿ ಡಿವೋರ್ಸ್ ಪಡೆದಿದ್ದರು.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!