ಡಾಲಿ ಧನಂಜಯ್, ರಚಿತಾ ರಾಮ್ ನಟನೆಯ ಮಾನ್ಸೂನ್ ರಾಗ ಸಿನಿಮಾದ ರಿಲೀಸ್ ಮುಂದೂಡಿಕೆ ಆಗಿದೆ.
ಮಾನ್ಸೂನ್ ರಾಗ ಸಿನಿಮಾ ಆಗಸ್ಟ್ 19 ಕ್ಕೆ ಬಿಡುಗಡೆ ದಿನಾಂಕ ಘೋಷಿಸಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದೆ. ಹೊಸ ದಿನಾಂಕ ಶೀಘ್ರದಲ್ಲೇ ಪ್ರಕಟಿಸುವುದಾಗಿ ಚಿತ್ರತಂಡ ತಿಳಿಸಿದೆ.
ಡಾಲಿ ಧನಂಜಯ ನಟನೆಯ ಮಾನ್ಸೂನ್ ರಾಗ ಚಿತ್ರದ ಮಾನ್ಸೂನ್ ರಾಗ ಟ್ರೈಲರ್ ಬಿಡುಗಡೆ ಆಗಿದ್ದು ಕುತೂಹಲ ಮೂಡಿಸಿದೆ.
ಟ್ರೈಲರ್ ನಲ್ಲಿ ಈ ಚಿತ್ರ ಭಿನ್ನ ಎನಿಸುವ ದೃಶ್ಯಗಳು ಕಂಡು ಬರುತ್ತಿವೆ. ಕೆಲ ದಿನಗಳ ಹಿಂದೆ ಈ ಚಿತ್ರದ “ಮುದ್ದಾದ ಮೂತಿ” ಹಾಡು ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದಿತ್ತು. ಪ್ರಮೋದ್ ಮರವಂತೆ ಸಾಹಿತ್ಯದ ಈ ಹಾಡನ್ನು ವಾಸುಕಿ ವೈಭವ್ ಹಾಡಿದ್ದಾರೆ. ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.
ಸಾಕಷ್ಟು ತಿಂಗಳ ಹಿಂದೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಈ ಸಿನಿಮಾ 70-80ರ ದಶಕದಲ್ಲಿ ಕರಾವಳಿ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ. ಸಿನಿಮಾವನ್ನು ರವೀಂದ್ರನಾಥ್ ನಿರ್ದೇಶನ ಮಾಡಿದ್ದು, ಎ.ಆರ್. ವಿಖ್ಯಾತ್ ನಿರ್ಮಾಣ ಮಾಡಿದ್ದಾರೆ. ಸಂಭಾಷಣೆಯನ್ನು ಗುರು ಕಶ್ಯಪ್ ಬರೆದಿದ್ದಾರೆ.
______

Be the first to comment